News Karnataka Kannada
Thursday, May 02 2024
ಕಲಬುರಗಿ

ಚಕ್ರವರ್ತಿ ಸೂಲಿಬೆಲೆಗೆ ಬಿಗ್ ರಿಲೀಫ್ : ಎಫ್‌ಐಆರ್ ಗೆ ಕೋರ್ಟ್ ತಡೆಯಾಜ್ಞೆ

New Project 2024 01 30t163715.961
Photo Credit : News Kannada

ಕಲಬುರಗಿ : ಎಐಸಿಸಿ  ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ದ ಅಪಮಾನ ಪ್ರಕರಣ ಸಂಬಂಧಿಸಿ ಚಕ್ರವರ್ತಿ ಸೂಲಿಬೆಲೆಗೆ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಗೆ ಕಲಬುರಗಿ ಕೋರ್ಟ್ ತಡೆಯಾಜ್ಞೆ ನೀಡಿದೆ.

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚಕ್ರವರ್ತಿ ಸೂಲಿಬೆಲೆ, ಅಯೋಗ್ಯ ಪದವನ್ನು ಬಳಕೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ರಾಯಚೂರು ಪೊಲೀಸರು ಅವರ ವಿರುದ್ಧ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಲಬುರಗಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ದೂರು ಸಲ್ಲಿಸಿದ್ದರು. ಈ ಸಂಬಂಧ ಎಫ್‌ಐಆರ್ ದಾಖಲಾಗಿತ್ತು.

ಎಫ್‌ಐಆರ್ ತಡೆಯಾಜ್ಞೆ ಕೋರಿ ಚಕ್ರವರ್ತಿ ಸೂಲಿಬೆಲೆ ಕೋರ್ಟ್ ಮೊರೆ ಹೋಗಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಕಲಬುರಗಿ ಏಕ ಸದಸ್ಯ ಪೀಠದ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್, ತಡೆಯಾಜ್ಞೆ  ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು