Categories: ಕಲಬುರಗಿ

ಅರ್ಧ ಗಂಟೆ ಭಾಷಣದಲ್ಲಿ ಖರ್ಗೆ ಹೆಸರನ್ನೇ ಉಲ್ಲೇಖಿಸದ ಮೋದಿ

ಕಲಬುರಗಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಖಾತೆ ತೆರೆಯದ ಗ್ಯಾರಂಟಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಜನತೆಯಲ್ಲಿ‌ ಮನವಿ ಮಾಡಿದರು.

ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ತವರು ಜಿಲ್ಲೆಯಿಂದ ಲೋಕಸಭಾ ಚುನಾವಣಾ ಪ್ರಚಾರ ಆರಂಭಿಸಿದ ಅವರು, ನಾನು ಹಲವಾರು ಗ್ಯಾರಂಟಿ ಕೊಟ್ಟಿರುವಾಗ ರಾಜ್ಯದ ಜನ ನನಗೆ ರಾಜ್ಯದಲ್ಲಿ ಲೋಕಸಭಾ ಚುನಾವಣೆಯಲ್ಲಿ ಖಾತೆ ತೆರೆಯದ ಗ್ಯಾರಂಟಿ ನೀಡಿ ಎಂದರು.ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಸಮಾಜ ಘಾತುಕ ಶಕ್ತಿಗಳ ರಕ್ಷಣೆಗೆ ನಿಂತಿದ್ದರಿಂದ ಎಲ್ಲವೂ ಹದಗೆಡುತ್ತಿದೆ.‌ ಸಣ್ಣ ಸಣ್ಣ ಕಾಮಗಾರಿ ಗಳನ್ನು ಮಾಡಲು ಸರ್ಕಾರದ ಬಳಿ ಹಣ ಇಲ್ಲ. ಎಲ್ಲ ಶಾಸಕರಿಗೆ ದುಡ್ಡಿಲ್ಲ ಎಂದು ಹೇಳಲಾಗಿದೆ. ಪರಿಸ್ಥಿತಿ ಹೀಗಿರುವಾಗ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಹೇಗೆ ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯ ಸರ್ಕಾರದ ಆರೋಪ ಪಟ್ಟಿಯನ್ನೇ ಮಾಡಿದರು.

ಯುವಕರಿಗೆ ದೊಡ್ಡದಾದ ಭರವಸೆ ನೀಡಿ ಶಿಷ್ಯ ವೇತನ ನೀಡಲಾಗುತ್ತಿಲ್ಲ.‌ ಪ್ರಮುಖವಾಗಿ ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಹೀಗಾಗಿ ಸರ್ಕಾರದ ಭೃಷ್ಟಾಚಾರ ಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಿಗಾ ವಹಿಸುವಂತಾಗಲು ತಮಗೆ ಬಲ ತುಂಬಬೇಕು. ‌28 ಕ್ಕೆ 28 ಸೀಟುಗಳನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

ತಮ್ಮ ಬಿಜೆಪಿ‌ ಸರ್ಕಾರವಿದ್ದಾಗ ಕೆಕೆಆರ್ ಡಿಬಿ ಗೆ ಸಾವಿರಾರು ಕೋ.ರೂ ನೀಡಲಾಗಿತ್ತು. ‌ಆದರೆ ಕಾಂಗ್ರೆಸ್ ಸರ್ಕಾರ ಹೆಚ್ಚು ಹಣ ನಿಗದಿ ಮಾಡಲು ಇಚ್ಚಾಶಕ್ತಿತೋರುತ್ತಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

Nisarga K

Recent Posts

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

22 seconds ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

21 mins ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

40 mins ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

1 hour ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

1 hour ago

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

2 hours ago