Categories: ಕಲಬುರಗಿ

ಒಂದು ಕಡೆ ಭರದ ಕಾಮಗಾರಿ ಇನ್ನೊಂದು ಕಡೆ ಬಡ ರೈತನ ಗೋಳು

ಕಲಬುರಗಿ: ಅಫಜಲಪುರ ತಾಲೂಕಿನ ಮೂರು ಕಡೆಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಬೈಪಾಸ್ ರಸ್ತೆಗಳ ನಿರ್ಮಾಣ ಕಾರ್ಯ ನಡೆಯುತ್ತಿದ್ದು,ಒಂದು ಕಡೆ ಸಂತಸ ತಂದರೆ ಇನ್ನೊಂದು ಕಡೆ ರೈತರಿಗೆ ದುಃಖ ತರಿಸುತ್ತಿದೆ.ಏಕೆಂದರೆ ತಿಂಗಳುಗಳಿಂದ ತಾಲೂಕಿನ ಚೌಡಾಪುರ,ಬಳೂರ್ಗಿ,ಅಫಜಲಪುರ ಪಟ್ಟಣದಲ್ಲಿ ಬೈಪಾಸ್ ರಸ್ತೆಗಳು ನಡೆದಿದ್ದು,ರಸ್ತೆಯ ಪಕ್ಕದಲ್ಲಿನ ರೈತರು ತಮ್ಮ ಹೊಲಗಳಲ್ಲಿ ತುಂತುರು ಹನಿ ನೀರಾವರಿ ಬೇಸಾಯ ಮಾಡಿಕೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ರೈತರಿಗೆ ಯಾವುದೇ ನೋಟಿಸ್ ನೀಡದೆ ಬೈಪಾಸ್ ರಸ್ತೆಗಳ ಕಾಮಗಾರಿ ಪ್ರಾರಂಬಿಸಿದ್ದಾರೆ ಎಂದು ಇಂಗಳಗಿ ಗ್ರಾಮದ ರೈತ ರವಿ ಸೈಬಣ್ಣಾ ಅಂಗಡಿ ಅವರು ತಮ್ಮ ಅಳಲನ್ನು ತೊಡಿಕೊಂಡಿದ್ದಾರೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನನ್ನ 6 ಎಕರೆ ಹೊಲದಲ್ಲಿ ಕುಂಬಳಕಾಯಿ ಬೆಳೆ ಬೆಳೆದಿದ್ದೆನೆ. ಇನ್ನೇನು ಕೆಲವೇ ದಿನಗಳಲ್ಲಿ ಕಾಯಿಗಳು ಆಗುವ ಹಂತದಲ್ಲಿ ರಸ್ತೆ ಕಾಮಗಾರಿ ಪ್ರಾರಂಭಿಸಿದ್ದಾರೆ.

ಅದರಿಂದ ಧೂಳು ಹೆಚ್ಚಾಗಿ ಕುಂಬಳ ಕುಡಿಗಳ ಮೇಲೆ ಧೂಳು ಕೂತು ಒಣಗಿ ಹೊಗುತ್ತಿವೆ. ಸುಮಾರು ನಾಲ್ಕು ಲಕ್ಷ ಖರ್ಚು ಮಾಡಿ ಬೆಳೆ ಬೆಳೆದಿದ್ದೆನೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ ಎಂದು ರೈತ ರವಿ ಅಂಗಡಿ ಕಣ್ಣಿರು ಹಾಕುತ್ತಿದ್ದಾರೆ. ಈ ಮೊದಲು ರಸ್ತೆ ಮಾಡುವುದಾಗಿ ಯಾವುದೇ ನೋಟಿಸ್ ನೀಡಿಲ್ಲ. ನಾವು ನಮ್ಮ ಬೆಳೆ ಹಾಳಾಗುತ್ತಿದೆ ಪರಿಹಾರ ನೀಡಿ ಎಂದು ಕೇಳಿದರೆ ಯಾವೊಬ್ಬ ಅಧಿಕಾರಿಗಳು ಪರಿಗಣನೆ ಮಾಡುತ್ತಿಲ್ಲ.

ಈ ಬೆಳೆಯ ಫಸಲು ನಮ್ಮ ಕೈಗೆ ಬಾರದಿದ್ದರೆ ನಮ್ಮ ಜೀವನ ಬರಿದಾಗಿ ಹೋಗುತ್ತದೆ ಎಂದು ಬಡ ರೈತ ತನ್ನ ಅಳಲನ್ನು ತೊಡಿಕೊಂಡಿದ್ದಾನೆ. ಕೂಡಲೇ ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬಡ ರೈತರ ಬೆಳೆಗಳಿಗೆ ಪರಿಹಾರ ನೀಡಬೇಕು ಎಂದು ತಾಲೂಕಿನ ಜನರ ಒತ್ತಾಸೆಯಾಗಿದೆ.

Nisarga K

Recent Posts

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

17 mins ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

26 mins ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

26 mins ago

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

41 mins ago

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…

46 mins ago

ಮೊದಲ ಬಾರಿಗೆ ಮರಾಠಿ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ

ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…

59 mins ago