Categories: ಕಲಬುರಗಿ

ಎಫ್‌ಡಿಎ ಅಕ್ರಮ ಉನ್ನತ ತನಿಖೆ ಗೃಹ ಸಚಿವರಿಂದಲೇ ನಿರ್ಧಾರ: ಪ್ರಿಯಾಂಕ್‌ ಖರ್ಗೆ

ಕಲಬುರಗಿ: ಹತ್ತು ದಿನಗಳ ಹಿಂದೆ ನಡೆದ ಎಫ್ ಡಿಎ ನೇಮಕಾತಿ ಪರೀಕ್ಷೆ ಅಕ್ರಮ ಕುರಿತಾಗಿ ಸರ್ಕಾರ ಮುಂಜಾಗ್ರತೆ ಕೈಗೊಂಡಿದ್ದರಿಂದಲೇ ಅಕ್ರಮ ನಡೆಯುವಾಗಲೇ ಬಯಲಿಗೆಳೆಯಲಾಗಿದೆ. ಆದರೂ ಪ್ರಕರಣದಲ್ಲಿ ಎಲ್ಲರ ಪಾತ್ರ ಬಯಲಿಗೆ ಬರುವಂತಾಗಲು ಯಾವ ಹಂತದ ತನಿಖೆ ನಡೆಸಬೇಕು ಎಂಬುದನ್ನು ಗೃಹ ಸಚಿವರು ನಿರ್ಧರಿಸುತ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 20 ಜನರನ್ನು ಬಂಧಿಸಲಾಗಿದೆ. ಪೊಲೀಸರು ಎಲ್ಲ ಆಯಾಮಗಳಿಂದ ತನಿಖೆ ನಡೆಸುತ್ತಿದ್ದಾರೆ. ಬಿಜೆಪಿಯವರು ಆರೋಪಿಸಿದಂತೆ ಯಾರನ್ನೂ ರಕ್ಷಿಸುತ್ತಿಲ್ಲ. ಪಿಎಸ್‌ಐ ಹಗರಣದಲ್ಲಿ ಆಗಿನ ಬಿಜೆಪಿ ಸರ್ಕಾರ ನಡೆದುಕೊಂಡ ರೀತಿ ಎಲ್ಲರಿಗೂ ಗೊತ್ತಿದೆ. ಆದರೆ ತಮ್ಮ ಸರ್ಕಾರ ಯಾರನ್ನು ರಕ್ಷಿಸುತ್ತಿಲ್ಲ. ಎಲ್ಲ ಆಯಾಮಗಳಿಂದ ಸಮಗ್ರ ತನಿಖೆ ನಡೆಸಲಾಗುವುದು ಎಂದರು.

ಪ್ರಮುಖ ಆರೋಪಿ ಆರ್‌.ಡಿ.ಪಾಟೀಲ್‌ ಕಲಬುರಗಿ ನಗರದಲ್ಲೇ ಇದ್ದರೂ ಮಾಹಿತಿ ಅರಿತು ಬಂಧನ ಮಾಡದಿರುವ ನಿಟ್ಟಿನಲ್ಲಿ ಪೊಲೀಸರ ಕಾರ್ಯದಲ್ಲಿ ನಿಜವಾಗಿಯೂ ವೈಪಲ್ಯವಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದರೆ ಅವರ ವಿರುದ್ಧವೂ ತನಿಖೆ ನಡೆಸಲಾಗುವುದು. ಇತ್ತೀಚೆಗೆ ನಡೆದ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಸಹಾಯಕರ ಪರೀಕ್ಷೆ ಸಂದರ್ಭದಲ್ಲಿ ಹೆಣ್ಣು ಮಕ್ಕಳ ತಾಳಿ ತೆಗೆಸಲಾಗಿದೆಯಲ್ಲ ಎಂಬ ಪ್ರಶ್ನೆಗೆ ಮೌನವಾದರು.

Umesha HS

Recent Posts

ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​ : ಕಾರಣ ಇಲ್ಲಿದೆ

ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು…

11 mins ago

ಹಾಡಹಗಲೇ ಮನೆಗೆ ನುಗ್ಗಿ‌ದ ದುಷ್ಕರ್ಮಿಗಳು : ಜೀಪ್​ಗೆ ಬೆಂಕಿ ಹಚ್ಚಿ ಪರಾರಿ

ಹಾಡಹಗಲೇ ದುಷ್ಕರ್ಮಿಗಳು ಮನೆಗೆ ನುಗ್ಗಿ‌ ಟಿವಿ, ಫ್ರಿಡ್ಜ್ ಹಾಳು ಮಾಡಿರುವ ಘಟನೆ ಪಂಚಾಕ್ಷರಿ ನಗರದಲ್ಲಿ ನಡದಿದೆ.

14 mins ago

ಮ್ಯಾಗಿ ತಿಂದು 10 ವರ್ಷದ ಬಾಲಕ ಸಾವು : 6 ಮಂದಿ ಅಸ್ವಸ್ಥ

ಉತ್ತರ ಪ್ರದೇಶದ ಪಿಲಿಬಿತ್‌ ಜಿಲ್ಲಯಲ್ಲಿ ಒಂದು ದಾರುಣ ಘಟನೆ ನಡೆದಿದ್ದು 10 ವರ್ಷದ ಅಪ್ರಾಪ್ತ ಬಾಲಕ ಅನ್ನದೊಂದಿಗೆ ಮ್ಯಾಗಿ ತಿಂದ…

29 mins ago

ಪಲ್ಟಿಯಾದ ಲಾರಿಯಲ್ಲಿ 7 ಕೋ. ಹಣ ಪತ್ತೆ: ವಶಕ್ಕೆ ಪಡೆದ ಪೊಲೀಸರು

ಪಲ್ಟಿಯಾದ ಲಾರಿಯಲ್ಲಿ ಬರೋಬ್ಬರಿ 7 ಕೋಟಿ ಹಣವನ್ನು ವಶಕ್ಕೆ ಪಡೆದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

44 mins ago

ಪುಸ್ತಕದಲ್ಲಿ ಬೈಬಲ್‌ ಪದ ಬಳಕೆ : ಕರೀನಾ ಕಪೂರ್‌ಗೆ ಕೋರ್ಟ್‌ ನೋಟಿಸ್‌

ಗರ್ಭಧಾರಣೆಗೆ (ಪ್ರಗ್ನೆನ್ಸಿ) ಸಂಬಂಧಿಸಿದಂತೆ ಬರೆದ ಪುಸ್ತಕದ ಶೀರ್ಷಿಕೆಯಲ್ಲಿ ‘ಬೈಬಲ್’ ಪದ ಬಳಕೆ ಮಾಡಿದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ಬಾಲಿವುಡ್ ನಟಿ ಕರೀನಾ…

52 mins ago

ಭಯೋತ್ಪಾದಕ ಕೃತ್ಯದಲ್ಲಿ ಭಾಗಿ: ಉಗ್ರರ ಇಬ್ಬರು ಸಹಚರರ ಬಂಧನ

ಉಗ್ರರ ಇಬ್ಬರು ಸಹಚರರನ್ನು ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

1 hour ago