Categories: ಕಲಬುರಗಿ

ಉಮೇಶ್​ ಜಾಧವ್ ಬೆಂಬಲಿಗನ ಗಿರೀಶ ಹತ್ಯೆ ಪ್ರಕರಣ : ಆರೋಪಿಗಳ ಬಂಧನ

ಕಲಬುರಗಿ: ಸಂಸದ ಡಾ. ಉಮೇಶ್​ ಜಾಧವ್ ಬೆಂಬಲಿಗ, ಬಿಜೆಪಿ ಮುಖಂಡ ಗಿರೀಶ್ ಚಕ್ರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಕಲಬುರಗಿ ಜಿಲ್ಲೆಯ ಗಾಣಗಾಪುರ ಪೊಲೀಸರು ಬಂಧಿಸಿದ್ದಾರೆ. ಓರ್ವ ಬಾಲಕ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತರನ್ನು ಸಚಿನ್ ಕಿರಸಾವಳಗಿ, ವಿಶ್ವನಾಥ ಅಲಿಯಾಸ್ ಕುಮ್ಯಾ, ಪ್ರಜ್ವಲ್ ಎಂದು ಗುರುತಿಸಲಾಗಿದೆ. ಇನ್ನೊಬ್ಬ ಬಂಧಿತ ಬಾಲಕನಾಗಿದ್ದಾನೆ.

ಫೆಬ್ರವರಿ 29ರಂದು ಪಾರ್ಟಿ ಕೊಡುವ ನೆಪದಲ್ಲಿ ಗಿರೀಶ್ ಚಕ್ರ ಅವರನ್ನು ಕರೆದು ಹತ್ಯೆ ಮಾಡಲಾಗಿತ್ತು. ಕಣ್ಣಿಗೆ ಖಾರದ ಪುಡಿ ಎರಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಸಾಗನೂರ ಗ್ರಾಮದ ಜಮೀನಿನಲ್ಲಿ ಈ ಕೃತ್ಯ ಎಸಗಲಾಗಿತ್ತು.

ಗಿರೀಶ್ ಚಕ್ರ ಅವರನ್ನು ಬಿಎಸ್‌ಎನ್‌ಎಲ್ ಸಲಹಾ ಸಮಿತಿ ನಿರ್ದೇಶಕರನ್ನಾಗಿ ಕೆಲವು ದಿನಗಳ ಹಿಂದೆ ಸಂಸದ ಉಮೇಶ್ ಜಾದವ್ ನೇಮಕ ಮಾಡಿದ್ದರು. ಈ ಪ್ರಯುಕ್ತ ಪಾರ್ಟಿ ಕೊಡುತ್ತೇವೆ ಎಂದು ನಂಬಿಸಿ, ಗಿರೀಶ್ ಚಕ್ರ ಅವರ ಸ್ನೇಹಿತರೇ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿತ್ತು. ಪಾರ್ಟಿಗೆಂದು ಜಮೀನಿಗೆ ಬಂದ ಗಿರೀಶ್ ಅವರ ಕಣ್ಣಿಗೆ ಖಾರದಪುಡಿಯ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು.

ಬಳಿಕ ಪ್ರತಿಕ್ರಿ ಸಿದ್ದ ಸಂಸದ ಉಮೇಶ್ ಜಾಧವ್, ಕೊಲೆಯಾದ ಗಿರೀಶ್ ಚಕ್ರ ತಮ್ಮ ಕಟ್ಟಾ ಬೆಂಬಲಿಗನಾಗಿರುವುದನ್ನು ಒಪ್ಪಿಕೊಂಡಿದ್ದರು. ಅಲ್ಲದೆ, ಗಿರೀಶ್ ಉತ್ತಮ ಕೆಲಸಗಾರನಾಗಿದ್ದು, ಆತನ ಬಗ್ಗೆಒಳ್ಳೆಯ ಅಭಿಪ್ರಾಯ ಎಲ್ಲರಲ್ಲಿಯೂ ಇತ್ತು ಎಂದಿದ್ದರು.

ಪ್ರಕರಣವನ್ನು ರಾಜಕೀಯವಾಗಿ ಗಂಭೀರವಾಗಿ ತೆಗೆದುಕೊಂಡಿದ್ದ ಬಿಜೆಪಿ, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿತ್ತು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಅದರಲ್ಲಿಯೂ, ಪ್ರಿಯಾಂಕ ಖರ್ಗೆ ಅವರ ಉಸ್ತುವಾರಿಗೊಳಪಟ್ಟಿರುವ ಕಲಬುರಗಿಯಲ್ಲಿ ಕೊಲೆ, ಸುಲಿಗೆ ಮತ್ತಿತರ ಅಕ್ರಮ ಚಟುವಟಿಕೆಗಳು ಅವ್ಯಾಹತವಾಗಿ ನಡೆಯುತ್ತಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿತ್ತು.

ಕಲಬುರಗಿ:ಸಂಸದ ಡಾ. ಉಮೇಶ್​ ಜಾಧವ್ ಬೆಂಬಲಿಗ, ಬಿಜೆಪಿ ಮುಖಂಡ ಗಿರೀಶ್ ಚಕ್ರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಕಲಬುರಗಿ ಜಿಲ್ಲೆಯ ಗಾಣಗಾಪುರ ಪೊಲೀಸರು ಬಂಧಿಸಿದ್ದಾರೆ. ಓರ್ವ ಬಾಲಕ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತರನ್ನು ಸಚಿನ್ ಕಿರಸಾವಳಗಿ, ವಿಶ್ವನಾಥ ಅಲಿಯಾಸ್ ಕುಮ್ಯಾ, ಪ್ರಜ್ವಲ್ ಎಂದು ಗುರುತಿಸಲಾಗಿದೆ. ಇನ್ನೊಬ್ಬ ಬಂಧಿತ ಬಾಲಕನಾಗಿದ್ದಾನೆ.

ಫೆಬ್ರವರಿ 29ರಂದು ಪಾರ್ಟಿ ಕೊಡುವ ನೆಪದಲ್ಲಿ ಗಿರೀಶ್ ಚಕ್ರ ಅವರನ್ನು ಕರೆದು ಹತ್ಯೆ ಮಾಡಲಾಗಿತ್ತು. ಕಣ್ಣಿಗೆ ಖಾರದ ಪುಡಿ ಎರಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಸಾಗನೂರ ಗ್ರಾಮದ ಜಮೀನಿನಲ್ಲಿ ಈ ಕೃತ್ಯ ಎಸಗಲಾಗಿತ್ತು.

ಗಿರೀಶ್ ಚಕ್ರ ಅವರನ್ನು ಬಿಎಸ್‌ಎನ್‌ಎಲ್ ಸಲಹಾ ಸಮಿತಿ ನಿರ್ದೇಶಕರನ್ನಾಗಿ ಕೆಲವು ದಿನಗಳ ಹಿಂದೆ ಸಂಸದ ಉಮೇಶ್ ಜಾದವ್ ನೇಮಕ ಮಾಡಿದ್ದರು. ಈ ಪ್ರಯುಕ್ತ ಪಾರ್ಟಿ ಕೊಡುತ್ತೇವೆ ಎಂದು ನಂಬಿಸಿ, ಗಿರೀಶ್ ಚಕ್ರ ಅವರ ಸ್ನೇಹಿತರೇ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿತ್ತು. ಪಾರ್ಟಿಗೆಂದು ಜಮೀನಿಗೆ ಬಂದ ಗಿರೀಶ್ ಅವರ ಕಣ್ಣಿಗೆ ಖಾರದಪುಡಿಯ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು.

ಬಳಿಕ ಪ್ರತಿಕ್ರಿ ಸಿದ್ದ ಸಂಸದ ಉಮೇಶ್ ಜಾಧವ್, ಕೊಲೆಯಾದ ಗಿರೀಶ್ ಚಕ್ರ ತಮ್ಮ ಕಟ್ಟಾ ಬೆಂಬಲಿಗನಾಗಿರುವುದನ್ನು ಒಪ್ಪಿಕೊಂಡಿದ್ದರು. ಅಲ್ಲದೆ, ಗಿರೀಶ್ ಉತ್ತಮ ಕೆಲಸಗಾರನಾಗಿದ್ದು, ಆತನ ಬಗ್ಗೆಒಳ್ಳೆಯ ಅಭಿಪ್ರಾಯ ಎಲ್ಲರಲ್ಲಿಯೂ ಇತ್ತು ಎಂದಿದ್ದರು.

ಪ್ರಕರಣವನ್ನು ರಾಜಕೀಯವಾಗಿ ಗಂಭೀರವಾಗಿ ತೆಗೆದುಕೊಂಡಿದ್ದ ಬಿಜೆಪಿ, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿತ್ತು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಅದರಲ್ಲಿಯೂ, ಪ್ರಿಯಾಂಕ ಖರ್ಗೆ ಅವರ ಉಸ್ತುವಾರಿಗೊಳಪಟ್ಟಿರುವ ಕಲಬುರಗಿಯಲ್ಲಿ ಕೊಲೆ, ಸುಲಿಗೆ ಮತ್ತಿತರ ಅಕ್ರಮ ಚಟುವಟಿಕೆಗಳು ಅವ್ಯಾಹತವಾಗಿ ನಡೆಯುತ್ತಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿತ್ತು.

Nisarga K

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

6 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

6 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

7 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

7 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

8 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

8 hours ago