News Karnataka Kannada
Thursday, May 02 2024
ಕಲಬುರಗಿ

ರಥದ ಚಕ್ರಕ್ಕೆ ಸಿಲುಕಿ ಹೋಮ್ ಗಾರ್ಡ್ ಸಾವು

ಶರಣಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಉಚ್ಚಾಯಿ (ಸಣ್ಣ ರಥೋತ್ಸವ) ಸಂದರ್ಭದಲ್ಲಿ ರಥದ ಚಕ್ರಕ್ಕೆ ಸಿಲುಕಿ ಭದ್ರತಾ ಕರ್ತವ್ಯದಲ್ಲಿದ್ದ ಗೃಹರಕ್ಷಕ ದಳದ ಸಿಬ್ಬಂದಿ ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ.
Photo Credit : NewsKarnataka

ಕಲಬುರಗಿ: ಶರಣಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಉಚ್ಚಾಯಿ (ಸಣ್ಣ ರಥೋತ್ಸವ) ಸಂದರ್ಭದಲ್ಲಿ ರಥದ ಚಕ್ರಕ್ಕೆ ಸಿಲುಕಿ ಭದ್ರತಾ ಕರ್ತವ್ಯದಲ್ಲಿದ್ದ ಗೃಹರಕ್ಷಕ ದಳದ ಸಿಬ್ಬಂದಿ ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ.

ಬೀದರ್ ಜಿಲ್ಲೆಯ ಚಿಟಗುಪ್ಪ ತಾಲ್ಲೂಕಿನ ಇಟಗಾ ಗ್ರಾಮದ ರಾಮ ಸಿದ್ದಪ್ಪ (31) ಮೃತಪಟ್ಟ ಸಿಬ್ಬಂದಿ. ಬೀದರ್ ಜಿಲ್ಲೆಯ ಮತ್ತೊಬ್ಬ ಸಿಬ್ಬಂದಿ ಅಶೋಕ ರೆಡ್ಡಿ ಅವರಿಗೂ ಗಾಯಗಳಾಗಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಚೇತನ್ ಆರ್. ಮಾಹಿತಿ ನೀಡಿದರು.

ಶರಣಬಸವೇಶ್ವರರ ಜಾತ್ರಾ ಮಹೋತ್ಸವದಲ್ಲಿ ಸಂಪ್ರದಾಯದಂತೆ ಉಚ್ಚಾಯಿ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ರಥದ ಬಳಿ ಸಾಗುತ್ತಿದ್ದ ಭಕ್ತರನ್ನು ನಿಯಂತ್ರಿಸಲು ಮುಂದಾದ ರಾಮ ಅವರು ರಥದಡಿ ಸಿಲುಕಿದರು. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಮೃತಪಟ್ಟರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು