News Karnataka Kannada
Tuesday, April 16 2024
Cricket
ಕಲಬುರಗಿ

ಆಜಾನ್ ಕುರಿತಂತೆ ಸೌಹಾರ್ದತೆಯಿಂದ ಬಗೆಹರಿಸಲು ಸೂಚನೆ: ಸಿಎಂ ಬಸವರಾಜ ಬೊಮ್ಮಾಯಿ

ಸಿಎಂ ಬಸವರಾಜ ಬೊಮ್ಮಾಯಿ
Photo Credit :

ಕಲಬುರಗಿ: ಆಜಾನ್ ಕುರಿತಂತೆ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆಗಳನ್ನು ನಡೆಸಿ ಸೌಹಾರ್ದತೆಯಿಂದ ಸಮಸ್ಯೆ ಗಳನ್ನು ಬಗೆಹರಿಸಲು ಸೂಚನೆ ನೀಡಲಾಗಿದೆ. ಈ ಪ್ರಕ್ರಿಯೆ ನಡೆಯುತ್ತಿದೆ. ಕಾನೂನನ್ನು ಎಲ್ಲರೂ ಪಾಲಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅವರಿಂದು ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಆಜಾನ್ ಬಗ್ಗೆ ಉಚ್ಚ ನ್ಯಾಯಾಲಯದ ಆದೇಶವಿದೆ. ಆ ಪ್ರಕಾರ ಸುತ್ತೋಲೆಯನ್ನು ಈಗಾಗಲೇ ಹೊರಡಿಸಲಾಗಿದೆ. ಯಾವ ಯಾವ ಸಂದರ್ಭದಲ್ಲಿ ಎಷ್ಟು ಡೆಸಿಬಲ್ ಇರಬೇಕೆಂದು ಕಾನೂನು ಇದೆ. ಡಿಜಿಯವರು ಸುತ್ತೋಲೆ ಹೊರಡಿಸಿದ್ದಾರೆ ಎಂದರು.

ಪಕ್ಷದಲ್ಲಿ ಹಿಂದೆಂದಿಗಿಂತಲೂ ಹೆಚ್ಚಿನ ಒಗ್ಗಟ್ಟು ಇದೆ. ಪಕ್ಷದಲ್ಲಿ ಯಾವ ಅಸಮಾಧಾನವೂ ಇಲ್ಲ. ಕೆಲವು ವಿಚಾರಗಳನ್ನು ಚರ್ಚೆ ಮಾಡಿ ಬಗೆಹರಿಸಿಕೊಂಡಿದ್ದೇವೆ. ಹಿಂದೆಂದಿಗಿಂತಲೂ ಹೆಚ್ಚಿನ ಒಗ್ಗಟ್ಟು ನಮ್ಮಲ್ಲಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೆಚ್ಚಿನ ಕಾಳಜಿ ವಹಿಸಲಾಗಿದೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು