News Karnataka Kannada
Monday, April 22 2024
Cricket
ಕಲಬುರಗಿ

‘ಖಾಸಗಿ ಬಸ್-ಟ್ಯಾಂಕರ್’ ನಡುವೆ ಭೀಕರ ಅಪಘಾತ: ಮೂವರ ಸ್ಥಿತಿ ಗಂಭೀರ

Accident Logo
Photo Credit :

ಕಲಬುರ್ಗಿ:  ಖಾಸಗಿ ಬಸ್ ಹಾಗೂ ಸಿಮೆಂಟ್ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಈ ಅಪಘಾತದಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದರೇ, ಹಲವರು ಗಾಯಗೊಂಡಿರೋ ಘಟನೆ ಹುಮನಾಬಾದ್ ರಿಂಗ್ ರಸ್ತೆಯ ಹೊರವಲಯದಲ್ಲಿ  ನಡೆದಿದೆ.

ಕಲಬುರ್ಗಿಯ ಹುಮನಾಬಾದ್ ಕಡೆಯಿಂದ ಬರುತ್ತಿದ್ದಂತ ಖಾಸಗಿ ಬಸ್ ಹಾಗೂ ಟ್ಯಾಂಕರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ.

ಈ ಅಪಘಾತದಲ್ಲಿ ಎರಡೂ ವಾಹನಗಳು ಪಲ್ಟಿಯಾದ ಪರಿಣಾಮ, ಮೂವರು ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿ ತಲುಪಿದ್ದಾರೆ. ಅಲ್ಲದೇ ಹಲವರಿಗೆ ಸಣ್ಣ ಪುಟ್ಟ ಗಾಯವಾಗಿರೋದಾಗಿ ತಿಳಿದು ಬಂದಿದೆ.

ಇನ್ನೂ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಹುಮನಾಬಾದ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು