News Karnataka Kannada
Sunday, April 21 2024
Cricket
ಕಲಬುರಗಿ

ಪಿಎಸ್​ಐ ನೇಮಕಾತಿ ಅಕ್ರಮ ಹಿನ್ನೆಲೆ ಮತ್ತೆ ಇಬ್ಬರ ಬಂಧನ

Photo Credit :

ಕಲಬುರಗಿ : ಪಿಎಸ್‌ಐ ಅಕ್ರಮ ನೇಮಕಾತಿಗೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಅಫಜಲಪುರ ಶಾಸಕ ಎಂ.ವೈ.ಪಾಟೀಲ ಅವರ ಗನ್ ಮ್ಯಾನ್ ಹಯ್ಯಾಳಿ ದೇಸಾಯಿ ಹಾಗೂ ಸಿಎಆರ್ ಪೊಲೀಸ್ ಕಾನ್ ಸ್ಟೆಬಲ್ ರುದ್ರಗೌಡ ಪಾಟೀಲ ಎಂಬುವವರನ್ನು ಗುರುವಾರ ಬಂಧಿಸಿದ್ದಾರೆ.

ಇದರೊಂದಿಗೆ ಬಂಧಿತರ ಸಂಖ್ಯೆ ಒಂಬತ್ತಕ್ಕೆ ಏರಿದೆ. ಈಗಾಗಲೇ ಕಲಬುರಗಿಯ ಜ್ಞಾನಜ್ಯೋತಿ ಇಂಗ್ಲಿಷ್ ಮಾಧ್ಯಮ ಶಾಲೆಯ ಮೂವರು ಪರೀಕ್ಷಾ ‌ಮೇಲ್ವಿಚಾರಕಿಯರು, ಮೂವರು ಅಭ್ಯರ್ಥಿಗಳು ಹಾಗೂ ಶಾಲೆಯ ಮುಖ್ಯಸ್ಥೆ ದಿವ್ಯಾ ಹಾಗರಗಿ ಪತಿ ರಾಜೇಶ್ ಹಾಗರಗಿಯನ್ನು ಬಂಧಿಸಿದ್ದಾರೆ.

ಶಾಸಕರೊಂದಿಗೆ ಕಾರಿನಲ್ಲಿ ನಗರದ ರಾಮಮಂದಿರ ಬಳಿ ಹೊರಟಿದ್ದಾಗ ಸಿಐಡಿ ಪೊಲೀಸರು ಗನ್ ಮ್ಯಾನ್ ಹಯ್ಯಾಳಿಯನ್ನು ವಶಕ್ಕೆ ಪಡೆದರು‌.

ಬಂಧಿತ ಗನ್ ಮ್ಯಾನ್ ಹಯ್ಯಾಳಿ (ಅಯ್ಯಣ್ಣ) ದೇಸಾಯಿ ಪಿಎಸ್‌ಐ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ಆಯ್ಕೆಯಾಗಿದ್ದ ಎಂದು ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು