Categories: ಕಲಬುರಗಿ

ಕಲಬುರಗಿ: ಕೊಡಲಿಯಿಂದ ಕೊಚ್ಚಿ ವ್ಯಕ್ತಿ ಕೊಲೆ

ಅಫಜಲಪುರ (ಕಲಬುರಗಿ ಜಿಲ್ಲೆ) : ತಾಲ್ಲೂಕಿನ ಕರಜಗಿ ಸಮೀಪದ ಅಶೋಕ ನಗರದ ಜಮೀನಿನಲ್ಲಿ ಮಲಗಿದ್ದ ಬಸವರಾಜ ಕಾಲೇಸಾಬ್ ಕಲ್ಲಹಿಪ್ಪರಗಿ (40) ಎಂಬುವವರನ್ನು ಭಾನುವಾರ ದುಷ್ಕರ್ಮಿಗಳು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಇವರ ಜತೆಗೆ ಇದ್ದ ಗಂಗಾಧರ ಸಿದ್ಧಲಿಂಗ ಸೊನ್ನ ಅವರಿಗೆ ಗಂಭೀರವಾಗಿ ಗಾಯಗೊಂಡಿದ್ದು, ಕಲಬುರಗಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಯ ಹತ್ತಿರದಲ್ಲಿ ಇರುವ ಜಮೀನಿನಲ್ಲಿ ಬಸವರಾಜ ಮತ್ತು ಗಂಗಾಧರ ಮಲಗಿದ್ದರು. ರಾತ್ರಿ ವೇಳೆ ಅಪರಿಚಿತರು ದಾಳಿ ಮಾಡಿ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಗಂಗಾಧರ ಅವರಿಗೆ ಮೂಗು, ಕಣ್ಣಿಗೆ ಗಂಭೀರ ಗಾಯವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಿಗ್ಗೆ ಜಮೀನುಗಳಿಗೆ ತೆರಳಿದ್ದ ಗ್ರಾಮಸ್ಥರು ಈ ಇಬ್ಬರೂ ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಗಮನಿಸಿದ್ದರು. ಗ್ರಾಮಕ್ಕೆ ಓಡಿ ಬಂದು ಕೊಲೆಯಾದ ವಿಷಯ ತಿಳಿಸಿದರು. ವಾಪಸ್ ಬರುವ ವೇಳೆಗೆ ತೀವ್ರವಾಗಿ ಗಾಯಗೊಂಡಿದ್ದ ಗಂಗಾಧರ ಎದ್ದು ಕುಳಿತಿದ್ದರು. ಬಳಿಕ ಅವರನ್ನು ಕಲಬುರಗಿಯ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಹೇಳಿದ್ದಾರೆ.

ಕೊಲೆಗೆ ಕಾರಣ ತಿಳಿದುಬಂದಿಲ್ಲ. ಹತ್ಯೆಯ ಆರೋಪಿಗಳ ಬಂಧನಕ್ಕೆ ಶೋಧ ಕಾರ್ಯನಡೆದಿದೆ. ಮೃತರ ಸಹೋದರ ಚಿದಾನಂದ ಕಲ್ಲಹಿಪ್ಪರಗಿ ನಾಲ್ವರ ವಿರುದ್ಧ ದೂರು ನೀಡಿದ್ದಾರೆ ಎಂದು ಅಫಜಲಪುರ ಸಿಪಿಐ ಜಗದೇವಪ್ಪ ಪಾಳಾ ತಿಳಿಸಿದರು.

ಸ್ಥಳಕ್ಕೆ ಎಸ್ಪಿ ಇಶಾ ಪಂತ್, ಅಳಂದ ಡಿವೈಎಸ್ಪಿ ರವೀಂದ್ರ ಶಿರೂರ, ಪಿಎಸ್‌ಐ ವಿಶ್ವನಾಥ ಮುದರಡ್ಡಿ, ಬೆರಳಚ್ಚು ತಜ್ಞರು, ಶ್ವಾನದಳದ ತಂಡದವರು ಭೇಟಿ ನೀಡಿ ಪರಿಶೀಲಿಸಿದರು. ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Gayathri SG

Recent Posts

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

23 mins ago

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

36 mins ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

60 mins ago

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

1 hour ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

2 hours ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

2 hours ago