Categories: ಕಲಬುರಗಿ

ಕ್ಷುಲ್ಲಕ ಕಾರಣಕ್ಕೆ ಕೊಲೆ

ಕಲಬುರಗಿ: ಕಲಬುರಗಿ ನಗರದ ಅಕ್ಕಮಹಾದೇವಿ ಕಾಲೋನಿಯ ಹೈಕೋರ್ಟ್ ಮುಂಭಾಗದಲ್ಲಿ ಗುರುವಾರ ತಡರಾತ್ರಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿ ಓರ್ವನ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. 35 ವರ್ಷದ ಗುರುರಾಜ್ ಕುಲಕರ್ಣಿ ಕೊಲೆಯಾದವರು. ಪವನ್ ಜಹಾಗೀರದಾರ್ ಕೊಲೆ ಮಾಡಿದ ಆರೋಪಿ.

ಗುರುರಾಜ ಅವರು ಮನೆಯಲ್ಲಿ ನಾಯಿಯೊಂದನ್ನು ಸಾಕಿದ್ದರು. ಪವನ್, ಪದೇ ಪದೇ ನಾಯಿಗೆ ಕಲ್ಲು ಹೊಡೆಯುತ್ತಿದ್ದರು. ಇದೇ ಕಾರಣಕ್ಕೆ ಇಬ್ಬರ ಮಧ್ಯೆ ಆಗಾಗ ಜಗಳವಾಗುತ್ತಿತ್ತು. ಹೀಗಾಗಿ ಕೊಲೆಗೆ ಇದೇ ಕಾರಣವಿರಬಹುದೆಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ ​

ಎರಡು ದಿನಗಳ ಹಿಂದೆ ಕೂಡ ಇದೇ ಕಾರಣಕ್ಕೆ ಮತ್ತೆ ಇಬ್ಬರ ಮಧ್ಯೆ ಜಗಳವಾಗಿದೆ. ಈ ವಿಚಾರವಾಗಿ ಸಂಧಾನ ಮಾಡಿಕೊಳ್ಳೋಣ ಬಾ ಎಂದು ಪವನ್ ಹಾಗೂ ಆತನ ಗೆಳೆಯರು ಗುರುರಾಜ ಅವರನ್ನು ಕರೆದಿದ್ದರು. ಗುರುವಾರ ರಾತ್ರಿ ಮಾತುಕತೆ ನಡೆದ ಸಂದರ್ಭ ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ಹೊಡೆದಾಡುವ ವೇಳೆ ಗುರುರಾಜ ಮೇಲೆ ಪವನ್ ಕಲ್ಲಿನಿಂದ ಹಲ್ಲೆ ಮಾಡಿದ. ತೀವ್ರ ರಕ್ತಸ್ರಾವದಿಂದ ಗುರುರಾಜ ಸ್ಥಳದಲ್ಲೇ ಮೃತಪಟ್ಟರು’ ಎಂದು ಗ್ರಾಮೀಣ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.

Raksha Deshpande

Recent Posts

ಆಮ್ ಆದ್ಮಿ ಪಕ್ಷಕ್ಕೆ 7 ಕೋಟಿ ರೂ ವಿದೇಶಿ ಫಂಡಿಂಗ್: ತನಿಖೆ ಕೋರಿ ಗೃಹ ಸಚಿವಾಲಯಕ್ಕೆ ಇಡಿ ಪತ್ರ

ಆಮ್ ಆದ್ಮಿ ಪಕ್ಷಕ್ಕೆ  ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್‌ಸಿಆರ್‌ಎ ತನಿಖೆಯನ್ನು ಕೋರಿ…

2 hours ago

ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಸಾವು

ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…

2 hours ago

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

3 hours ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

3 hours ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

3 hours ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

3 hours ago