Categories: ಕಲಬುರಗಿ

ಚಿಕ್ಕಮ್ಮನ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಸಹೋದರ ಕೊಲೆ: ಐವರ ಬಂಧನ

ಕಲಬುರಗಿ : ಜ.25ರಂದು ಕಲಬುರಗಿ ಹೊರವಲಯದ ಸಾವಳಗಿ ಬಬಲಾದ್ ರೈಲ್ವೆ ಹಳಿ ಮೇಲೆ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಫೋಟೋಗ್ರಾಫರ್ ಶಿವಕುಮಾರ್ ಶವದ ಜಾಡು ಹಿಡಿದ ಹೊರಟ ಪೊಲೀಸರು ಐವರನ್ನ ಬಂಧಿಸಿದ್ದಾರೆ. ಸ್ವಂತ ಚಿಕ್ಕಮ್ಮನ ಮಗನಿಂದಲೇ ಶಿವಕುಮಾರ್​ ಹತ್ಯೆಯಾಗಿದ್ದು, ಕೊಲೆಯ ಕಾರಣ ಬೆಚ್ಚಿಬೀಳಿಸುತ್ತೆ.

ಶಿವಕುಮಾರ್​ರ ಚಿಕ್ಕಮ್ಮನ ಮಗ ಮಹಾಂತೇಶ್ ಆಳಂದಕರ್ ಕೊಲೆ ಆರೋಪಿ. ಈತನ ದೊಡ್ಡಪ್ಪನ ಮಗ ಶಿವಕುಮಾರ್​. ಫೋಟೋಗ್ರಾಫರ್ ಆಗಿದ್ದ ಶಿವಕುಮಾರ್​, ಮಹಾಂತೇಶ್​ನ ತಾಯಿ ಜತೆ ಅಕ್ರಮ ಸಂಬಂಧ ಹೊಂದಿದ್ದ. ಇದನ್ನು ಕಣ್ಣಾರೆ ಕಂಡಿದ್ದ ಆಕೆಯ ಮಗ ಮಹಾಂತೇಶ್, ತನ್ನ ಮಾವ ಬಸವರಾಜ್ ಜತೆ ಸೇರಿಕೊಂಡು ಸಹೋದರ ಶಿವಕುಮಾರ್​ನ ಹತ್ಯೆಗೆ ಸಂಚು ರೂಪಿಸಿದ್ದ.

ಅದರಂತೆ ಜ.25ರಂದು ಆಳಂದ ತಾಲೂಕಿನ ಶ್ರೀಚಂದ ಗ್ರಾಮದಿಂದ ಶಿವಕುಮಾರ್​ನನ್ನು ಮಹಾಂತೇಶ್ ಬೈಕ್​ನಲ್ಲಿ ಕರೆದುಕೊಂಡು ಹೋಗಿದ್ದ. ಮಾರ್ಗದಲ್ಲಿ ಶಿವಕುಮಾರ್​ನ ರುಂಡ ಕತ್ತರಿಸಿ ಕಲಬುರಗಿ ಹೊರವಲಯದ ಸಾವಳಗಿ ಬಬಲಾದ್ ರೈಲ್ವೆ ಹಳಿಗೆ ಎಸೆದು ಪರಾರಿಯಾಗಿದ್ದರು. ಈ ಕೃತ್ಯಕ್ಕೆ ಮಹಾಂತೇಶ್​ಗೆ ಸಹಕರಿಸಿದ ಬಸವರಾಜ್ ಸಲಗಾರ್, ಫಕರಿಪ್ಪ ಸಲಗಾರ್, ಸಿದ್ದಾರೂಢ ಕೋರಬಾರ್ ಮತ್ತು ಅಶೋಕ ಜಮಾದಾರ್ ಎಂಬುವರನ್ನೂ ಪೊಲೀಸರು ಬಂಧಿಸಿದ್ದಾರೆ.

Gayathri SG

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

7 mins ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

29 mins ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

52 mins ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

1 hour ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

1 hour ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

2 hours ago