News Karnataka Kannada
Wednesday, May 01 2024
ಕಲಬುರಗಿ

ಜಿಲ್ಲಾ ಪತ್ರಕರ್ತರ ಸಂಘದ ವಿಶೇಷ ಸಂಚಿಕೆ ಬಿಡುಗಡೆ

Kalburgi
Photo Credit :

ಕಲಬುರಗಿ: ಕಲಬುರಗಿಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಲಿ.)ಹಾಗೂ ಕಲಬುರಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಕಲಬುರಗಿ ಇದರ ಸಹಯೋಗದಲ್ಲಿ ನಡೆದ 36ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 3ವರ್ಷಗಳ  ಯಶೋಗಾಥೆಯ ಸಾಧನೆ ಸಂಭ್ರಮ ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಿದರು.

ಈ ಸಂಧರ್ಭದಲ್ಲಿ ಕಲಬುರಗಿ ಶ್ರೀ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿ ಡಾ.ಶರಣಬಸಪ್ಪ ಅಪ್ಪ ಕೇಂದ್ರ ಸಚಿವ ಭಗವಂತ ಖೂಬಾ,ಸಂಸದ ಉಮೇಶ್ ಜಾಧವ್,ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ,ಕರ್ನಾಟಕ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು,ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ,ಕಾರ್ಯಕಾರಿ ಸಮಿತಿ ಸದಸ್ಯರಾದ ವಿಜಯ ಕೋಟ್ಯಾನ್, ಭಾಸ್ಕರ ರೈ ಕಟ್ಟ ಮೊದಲಾದವರಿದ್ದರು.

ಇದೇ ಸಂದರ್ಭದಲ್ಲಿ 35ನೇ ಪತ್ರಕರ್ತರ ರಾಜ್ಯ ಸಮ್ಮೇಳನವನ್ಬು ಯಶಸ್ವಿಯಾಗಿ ಸಂಘಟಿಸಿದ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವನ್ನು ಅಭಿನಂದಿಸಲಾಯಿತು. ಅಖಿಲಭಾರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಅವರು ಸಂಘದ ಪದಾಧಿಕಾರಿಗಳನ್ನು ಅಭಿನಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು