ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆಯ ಅಕ್ರಮದಲ್ಲಿ ಭಾಗಿಯಾಗಿರುವ ಕುರಿತಾಗಿ ಆರೋಪಗಳು ಕೇಳಿಬಂದಿರುವ ಕಲಬುರ್ಗಿಯ ಶಾಲೆಯೊಂದರ ಮುಖ್ಯಸ್ಥೆ ದಿವ್ಯಾ ಹಾಗರಗಿ ಅವರಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ.
ಅವರು ನಮ್ಮ ಪಕ್ಷದ ನಾಯಕಿಯಲ್ಲ ಎಂದು ಬಿಜೆಪಿ ರಾಜ್ಯ ವಕ್ತಾರ ಹಾಗೂ ಶಾಸಕರಾದ ರಾಜಕುಮಾರ ಪಾಟೀಲ ತೇಲ್ಕೂರ ಅವರು ಸ್ಪಷ್ಟಪಡಿಸಿದ್ದಾರೆ.
ದಿವ್ಯಾ ಹಾಗರಗಿ ಅಥವಾ ಯಾರೇ ಆಗಿರಲಿ ಅಕ್ರಮದಲ್ಲಿ ಭಾಗಿಯಾದವರ ಮೇಲೆ ಕ್ರಮ ಖಚಿತ. ಅಕ್ರಮ ನಡೆದಿರುವುದು ಸಾಬೀತಾದರೆ ಶಿಕ್ಷೆ ಆಗಲಿದೆ ಎಂದು ಅವರು ತಿಳಿಸಿದ್ದಾರೆ.
ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರಕಾರವು ಈ ವಿಚಾರವಾಗಿ ಸಿಒಡಿ ತನಿಖೆಗೆ ಆದೇಶಿಸಿದೆ ಎಂದು ತಿಳಿಸಿದ್ದಾರೆ.