News Karnataka Kannada
Sunday, May 05 2024
ಕಲಬುರಗಿ

ಬೈಕ್-ಲಾರಿ ಮುಖಾಮುಖಿ ಡಿಕ್ಕಿ: ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು

Four killed in accident between truck and car
Photo Credit :

ಅಫಜಲಪುರ : ತಾಲ್ಲೂಕಿನ ಮಲ್ಲಾಬಾದ ಗ್ರಾಮದ ರಾಜ್ಯ ಹೆದ್ದಾರಿ ಮೇಲೆ ಪೆಟ್ರೋಲ್ ಪಂಪ್ ಹತ್ತಿರ ಬೈಕ್ ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ.

ಮೃತರನ್ನು ಚಿತ್ತಾಪುರ ತಾಲ್ಲೂಕಿನ ಮಲ್ಲಾಬಾದ್ ಇಂಗಳಗಿ ಗ್ರಾಮದ ನಿವಾಸಿಗಳಾದ ಚಾಸೀನ್ ಮಕಂದರ್ (24) ಹಾಗೂ ಹಾಜಿ ಕಲ್ಲಂಗರ್ (25) ಎಂದು ಗುರುತಿಸಲಾಗಿದೆ. ಮಹಿಬೂಬ್ ಮಕಂದರ್ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಕಲಬುರಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಂದೇ ಬೈಕಿನ ಮೇಲೆ ಮೂವರು ಪ್ರಯಾಣ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಮೂವರು ಅಫಜಲಪುರದಲ್ಲಿ ಗೌಂಡಿ ಕೆಲಸ ಮುಗಿಸಿಕೊಂಡು ಸ್ವಗ್ರಾಮಕ್ಕೆ ಮರಳುವಾಗ ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲಿಸಿದರು. ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು