Categories: ಕಲಬುರಗಿ

ಲಾಕ್‌ಡೌನ್ , ಸೆಮಿ ಲಾಕ್‌ಡೌನ್ ಬಗ್ಗೆ ತಜ್ಞರ ಸಭೆಯ ನಂತರ ತೀರ್ಮಾನ : ಸಿಎಂ ಬೊಮ್ಮಾಯಿ

ಕಲಬುರಗಿ: ರಾಜ್ಯದಲ್ಲಿ ಕಳೆದೊಂದು ವಾರದಿಂದ ಕೋರೋನಾ ಮತ್ತು ಓಮಿಕ್ರಾನ ವರದಿಗಳು ಹೆಚ್ಚಾಗುತ್ತಿದ್ದು,ಬರವಂತಹ ದಿನಗಳಲ್ಲಿ ತಜ್ಞರ ಜೊತೆಗೆ ನಡೆಯುವ ಸಭೆಯ ಬಳಿಕವೇ ಲಾಕ್ ಡೌನ ಮತ್ತು ಸೆಮಿ ಲಾಕ್ ಡೌನ್ ಬಗ್ಗೆ ಅಂತಿಮವಾಗಿ ತೀಮಾ೯ನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಂಗಳವಾರ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ,ಇಂದು ಸಾಯಂಕಾಲ ಕೋವಿಡ ಬಗ್ಗೆ ಸಭೆ ಮಾಡಲಿದ್ದೆವೆ. ಟಾಸ್ಕ ಪೋಸ೯ ಕಮಿಟಿ ಸದಸ್ಯರು ಇರಲಿದ್ದಾರೆ ಎಂದು ತಿಳಿಸಿದರು.

ಕೋರೋನಾ ಮತ್ತೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ, ಭಾರತ ಸರಕಾರ ಅನೇಕ ಮಾಗ೯ದಶ೯ನ ನೀಡಿದೆ.ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಹೆಚ್ಚಾಗಿದೆ.ಪಕ್ಕದ ರಾಜ್ಯದಲ್ಲಿ ಹೆಚ್ಚಾದಾಗ ನಮ್ಮ ರಾಜ್ಯದಲ್ಲಿ ಹೆಚ್ಚಾಗುತ್ತದೆ. ಇದರ ಬಗ್ಗೆ ಕಟ್ಟೆಚ್ಚರ ವಹಿಸಿ, ಗಡಿಗಳನ್ನು ಬಿಗಿ ಮಾಡಲಾಗಿದೆ ಎಂದರು.

ಔಷದಿ ಸೇರಿದಂತೆ ಎಲ್ಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.ರಾಜ್ಯದಲ್ಲಿ ಶಾಲೆಗಳ ರಜೆಯ ಬಗ್ಗೆ ಉನ್ನತ ಮಟ್ಟದ ತಜ್ಞರ ಜೊತೆಗೆ ಮಾತಾಡಿ,ಅವರು ಎನೂ ಹೇಳುತ್ತಾರೆಯೋ,ಕೇಳಿ ತಿಮಾ೯ನ ಮಾಡಲಾಗುವುದು ಎಂದರು.

ಈ ಸಮಯದಲ್ಲಿ ಜನರ ಸಹಕಾರ ಕೂಡಾ ಅಗತ್ಯ ಇದೆ.ಜನ ಸಹಕಾರ ನೀಡಿದರೇ,ಕೋವಿಡ ನಿಯಂತ್ರಣ ಮಾಡಬಹುದು. ಗಡಿಯಲ್ಲಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಇನ್ನಷ್ಟು ಸಿಬ್ಬಂದಿ ನಿಯೋಜನೆ ಮಾಡಲಾಗುವುದು ಎಂದರು.

ರಾಮನಗರ ಜಿಲ್ಲೆಯಲ್ಲಿ ವೇದಿಕೆ ಮೇಲೆ ಡಿ.ಕೆ.ಸುರೇಶ್, ಅಶ್ವಥ್ ನಾರಾಯಣ ಗಲಾಟೆ ಬಗ್ಗೆ ಮಾತನಾಡಿದ ಅವರು,ಇದು ಕನಾ೯ಟಕದ ಸಂಸ್ಕೃತಿ ಅಲ್ಲಾ,ಮಾತಿನಿಂದ ನಮ್ಮ ವಿಚಾರವನ್ನು ಹೇಳಬಹುದು ಎಂದರು. ಆದರೆ ಈ ರೀತಿ ವತ೯ನೆ ಸರಿಯಾಗಿಲ್ಲ ಎಂದರು.

Sneha Gowda

Recent Posts

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

12 mins ago

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

28 mins ago

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…

31 mins ago

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

54 mins ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

1 hour ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

1 hour ago