ಕಲಬುರಗಿ : ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಶನಿವಾರ ಕೋವಿಡ್ ದೃಢಪಟ್ಟಿದೆ. ಈ ಕುರಿತು ಟ್ವಿಟ್ ಮಾಡಿರುವ ಅವರು, ‘ಮೊದಲ ಹಾಗೂ ಎರಡನೆಯ ಅಲೆಯಲ್ಲಿ ನಾನು ಪಾರಾಗಿದ್ದೆ. ಒಮ್ಮೆ ಸುಳ್ಳು ಪಾಸಿಟಿವ್ ವರದಿ ಕೂಡ ಬಂದಿತ್ತು. ಇದರಿಂದ ಪದೇಪದೇ ತಪಾಸಣೆ ಮಾಡಿಸಿದಾಗಲೂ ನೆಗೆಟಿವ್ ವರದಿ ಬಂದಿತ್ತು. ಆದರೆ ಈಗ ಪಾಸಿಟಿವ್ ವರದಿ ಬಂದಿದೆ. ನನ್ನ ಸಿಬ್ಬಂದಿಗೂ ಪರೀಕ್ಷೆ ಮಾಡಿದ್ದು, ಅವರಿಗೆ ಸೋಂಕು ತಗಲಿಲ್ಲ’ ಎಂದು ಬರೆದುಕೊಂಡಿದ್ದಾರೆ.
‘ನನ್ನ ಜತೆ ಸಂಪರ್ಕ ಹೊಂದಿರುವ ಎಲ್ಲರೂ ಕೂಡ ಕೊರೊನಾ ತಪಾಸಣೆಗೆ ಒಳಗಾಗುವಂತೆ’ ಅವರು ವಿನಂತಿಸಿದ್ದಾರೆ. ಸದ್ಯ ಶಾಸಕರು ಬೆಂಗಳೂರಿನ ತಮ್ಮ ಮನೆಯಲ್ಲಿ ಹೋಮ್ ಐಸೋಲೇಷನ್ ನಲ್ಲಿದ್ದಾರೆ.
ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…
ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.
ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…
ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.
ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…
ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…