News Karnataka Kannada
Monday, May 13 2024
ಕಲಬುರಗಿ

ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ: ನಳಿನ್‌ ಕುಮಾರ್‌ ಕಟೀಲ್‌

Nalin Kumar
Photo Credit :

ಕಲಬುರಗಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶನಿವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಾಲ್ಕು ಮಂತ್ರಿಗಳ ಸ್ಥಾನ ಖಾಲಿ ಇರುವುದರಿಂದ, ಕಲಬುರಗಿಯಿಂದ ಚುನಾಯಿತ ಪ್ರತಿನಿಧಿಯೊಬ್ಬರಿಗೆ ಸ್ಥಾನ ನೀಡಲು ಮುಖ್ಯಮಂತ್ರಿಗಳು ಚಿಂತನೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರಗಿ ನಗರ ಪಾಲಿಕೆಗಳಿಗೆ ಸೆಪ್ಟೆಂಬರ್ 3 ರಂದು ಚುನಾವಣೆ ನಿಗದಿಯಾಗಿದ್ದು, ಈ ಕುರಿತು ಮಾತನಾಡಿರುವ ಅವರು, ಬಿಜೆಪಿ ಜನಪರ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ ಮತ್ತು ಎಲ್ಲಾ ಮೂರು ನಗರ ಸಂಸ್ಥೆಗಳಲ್ಲಿ ಬಹುಮತ ಗಳಿಸುವ ವಿಶ್ವಾಸವಿದೆ. ನಾವು ಯಾವುದೇ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು