News Karnataka Kannada
Friday, May 03 2024
ಕಲಬುರಗಿ

‘ಸವಾಲುಗಳ ಎರಡು ವರ್ಷ, ಸಮೃದ್ಧಿಯ ಸ್ಪರ್ಶ’ ಕಿರು ಹೊತ್ತಿಗೆ ಬಿಡುಗಡೆ

Kalburgi 27072021
Photo Credit :

ಕಲಬುರಗಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರವು ಸವಾಲುಗಳ ನಡುವೆ ಸಾರ್ಥಕ ಎರಡು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ಸೋಮವಾರ ತಮ್ಮ ಕಚೇರಿಯಲ್ಲಿ ಕಲಬುರಗಿ ಜಿಲ್ಲಾ ಪ್ರಗತಿ ವಿವರವುಳ್ಳ ‘ಸವಾಲುಗಳ ಎರಡು ವರ್ಷ, ಸಮೃದ್ಧಿಯ ಸ್ಪರ್ಶ’ ಕಿರು ಹೊತ್ತಿಗೆಯನ್ನು ಬಿಡುಗಡೆಗೊಳಿಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕೇಂದ್ರ ಕಚೇರಿಯಿಂದ ಹೊರತರಲಾದ ‘ಸವಾಲುಗಳ ಮೀರಿದ ಸಾಧನಾ ಪರ್ವ’ ರಾಜ್ಯ ಮಟ್ಟದ ಪ್ರಗತಿ ಹೊತ್ತಿಗೆ ಮತ್ತು ಕಲಬುರಗಿ ಜಿಲ್ಲಾ ಕಚೇರಿಯಿಂದ ಹೊರತರಲಾದ ಕಿರು ಹೊತ್ತಿಗೆಯನ್ನು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿ.ಇ.ಓ. ಡಾ.ದಿಲೀಶ್‌, ಮಹಾನಗರ ಪಾಲಿಕೆಯ ಆಯುಕ್ತ ಸ್ನೇಹಲ ಸುಧಾಕರ ಲೋಖಂಡೆ, ವಾರ್ತಾ ಮತ್ತು ಸಂಪರ್ಕ ಇಲಾಖೆಯ ಉಪನಿರ್ದೇಶಕ ಸಿದ್ದೇಶ್ವರಪ್ಪ ಜಿ.ಬಿ. ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು