Categories: ಕಲಬುರಗಿ

ಸಾಫ್ಟ್ ಕಾರ್ನರ್ ಅವಶ್ಯಕತೆ ನನಗಿಲ್ಲ: ಬಿಜೆಪಿ, ಕಾಂಗ್ರೆಸ್ ಎರಡರ ಪರವಾಗಿಯೂ ನಾನಿಲ್ಲ; ಎಚ್.ಡಿ.ಕುಮಾರಸ್ವಾಮಿ

ಕಲಬುರಗಿ, ;ಸಾಫ್ಟ್ ಕಾರ್ನರ್ ಅವಶ್ಯಕತೆ ನನಗಿಲ್ಲ. ನಾನು ಬಿಜೆಪಿ ಪರವಾಗಿ ಇಲ್ಲ. ಕಾಂಗ್ರೆಸ್ ಪರವಾಗಿಯೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಮಹಾನಗರ ಪಾಲಿಕೆ ಚುನಾವಣಾ ಪ್ರಚಾರಕ್ಕಾಗಿ ಸೋಮವಾರ ನಗರಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಅಧ್ಯಕ್ಷರು ನನ್ನ ಬಗ್ಗೆ ಯಡಿಯೂರಪ್ಪ ಪರವಾಗಿ ಸಾಫ್ಟ್ ಕಾರ್ನರ್ ಮಾತುಗಳನ್ನು ಹೇಳಿದ್ದಾರೆ. ಆದರೆ ನಮಗೆ ಸಾಫ್ಟ್ ಕಾರ್ನರ್ ಅವಶ್ಯಕತೆಯಿಲ್ಲ ಎಂದರು.ಕೋವಿಡ್ ಕಾರಣ ಹೋರಾಟ ಮಾಡಲಾಗಿಲ್ಲ. ಅವಶ್ಯಕತೆ ಬಂದಾಗ ಹೋರಾಟಕ್ಕೆ ಧುಮಕುತ್ತಿವೆ. ಕಾಂಗ್ರೆಸ್ ನಾಯಕರು ಪ್ರತಿನಿತ್ಯ ಭ್ರಷ್ಟಾಚಾರ ಬಗ್ಗೆ ಮಾತನಾಡುತ್ತಿದ್ದಾರೆ. ಅವರ ಅವಧಿಯಲ್ಲಿ ಏನಾಗಿದೆ ಅಂತ ಎಲ್ಲರಿಗೂ ಗೊತ್ತಿದೆ ಎಂದು ಕಿಡಿಕಾರಿದರು.
ರಾಜಕಾರಣದಲ್ಲಿ ಇತ್ತೀಚೆಗೆ ಸಿದ್ಧಾಂತಗಳಲ್ಲಿ ಬೆನ್ನು ತಟ್ಟಿಕೊಳ್ಳುವ ಸ್ಥಿತಿ ಇಲ್ಲ. ಮೈಸೂರು ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರೇ ನಮ್ಮ ಜೊತೆ ಮೈತ್ರಿಗೆ ಸಿದ್ದರಿರಲಿಲ್ಲ.‌ ಕಲಬುರಗಿ ಪಾಲಿಕೆಯಲ್ಲಿ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬರುವ ವಿಶ್ವಾಸ ಇದೆ. ಒಂದು ವೇಳೆ ಅತಂತ್ರ‌ ಫಲಿತಾಂಶ ಬಂದರೆ ಮುಂದೆ ಯಾವ ಪಕ್ಷದೊಂದಿಗೆ ‌ಮೈತ್ರಿ ಮಾಡಿಕೊಳ್ಳಬೇಕು ಎಂಬುದನ್ನು ಮುಂದೆ ನಿರ್ಧರಿಸುತ್ತೇವೆ ಎಂದರು.ಇನ್ನು ಯಡಿಯೂರಪ್ಪ ಪಕ್ಷ ಸಂಘಟನೆ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿದ ಅವರು, ಅದು ತಪ್ಪು ಅಂತ ಹೇಳಲ್ಲಾ, ಅದರ ಬಗ್ಗೆ ಸಣ್ಣದಾಗಿ ನಾನು ಮಾತನಾಡಲ್ಲ ಎಂದರು. ಕೋವಿಡ್ ರೂಲ್ಸ್ ಪಾಲಿಸಬೇಕು ಅಂತಾರೆ. ಆದರೆ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದ್ದರಿಂದ ಚುನಾವಣೆ ಅನಿವಾರ್ಯ ಎಂದು ಹೇಳಿದರು.
ಜೆಡಿಎಸ್ ಪಕ್ಷ ತೆರೆದ ಬಾಗಿಲಿದ್ದಂತೆ. ಹೋಗುವವರು ಹೋಗಲಿ, ಬರುವವರು ಬರಲಿ‌. ಆದರೆ, ಪಕ್ಷ ಬಿಟ್ಟು ಹೋಗಿ ಎಂದು ಹೇಳುವಷ್ಟು ದುರಹಂಕಾರ ಮಾತ್ರ ಇಲ್ಲ ಎಂದು ಪರೋಕ್ಷವಾಗಿ ಜಿ.ಟಿ ದೇವೆಗೌಡರಿಗೆ ಟಾಂಗ್‌ ಕೊಟ್ಟರು. ಕಾಂಗ್ರೆಸ್ ಸೇರುವ ಬಗ್ಗೆ ಜಿ.ಟಿ.ದೇವೇಗೌಡ ಅವರು ತಮ್ಮ ನಿರ್ಧಾರವನ್ನು ಹೇಳಿದ್ದಾರೆ. ಈ ಬಗ್ಗೆ ನಾನು ಹೆಚ್ಚು ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ. ನಾವು ಮುಖಂಡರನ್ನು ಕರೆತರಲು ಬೇರೆ ಪಕ್ಷದ ಮುಖಂಡರ ಮನೆ ಬಳಿ ನಿಂತಿಲ್ಲ.‌ ಕಾಂಗ್ರೆಸ್, ಬಿಜೆಪಿಯವರೇ ಈ ಕೆಲಸ ಮಾಡುತ್ತಿದ್ದಾರೆ ಎಂದರು.ನಮ್ಮ ಪಕ್ಷದ ಕಾರ್ಯಕರ್ತರು ಸರಿ ಇಲ್ಲ ಎಂದು ನಾನು ಎಲ್ಲೂ ಹೇಳಿಲ್ಲ. ಅದನ್ನು ಮಾಧ್ಯಮಗಳು ತಿರುಚಿ, ಅಪಪ್ರಚಾರ ಮಾಡಿವೆ. ನಾನು ಬಂದು ಹೋದ ನಂತರ ಕಾರ್ಯಕರ್ತರು ನಿಷ್ಕ್ರಿಯರಾಗುತ್ತಾರೆ ಎಂದು ಮುಖಂಡರು ಹೇಳಿದ್ದರು. ಅದನ್ನೇ ‌ನಾನು ಹೇಳಿದ್ದೇನೆ. ನಮ್ಮ ಪಕ್ಷದ ಉಳಿದಿರುವುದೇ ಲಕ್ಷಾಂತರ ‌ಕಾರ್ಯಕರ್ತರಿಂದ ಉಳಿದಿದೆ. ಕಾರ್ಯಕರ್ತರಿಗೆ ನಾನು ಅವಹೇಳನ, ಅವಮಾನ ಮಾಡುವ ಕೆಲಸ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

Indresh KC

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

3 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

3 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

3 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

3 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

5 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

5 hours ago