Categories: ಕಲಬುರಗಿ

ಕಲಬುರ್ಗಿ: ಬಸ್ ಅಪಘಾತ, 40 ಪ್ರಯಾಣಿಕರಿಗೆ ಗಂಭೀರ ಗಾಯ

ಕಲಬುರಗಿ: ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಚಿತ್ತಾಪುರ ತಾಲೂಕು ಸಾರಿಗೆ ಘಟಕಕ್ಕೆ ಸೇರಿದ ಬಸ್ ನ.3ರ ಗುರುವಾರ ಮಧ್ಯಾಹ್ನ ಶಹಾಬಾದ್ ಕಾಗಿಣಾ ನದಿಗೆ ಬಿದ್ದ ಪರಿಣಾಮ 40 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಜೇವರ್ಗಿಯಿಂದ ಶಹಾಬಾದ ಮಾರ್ಗವಾಗಿ ಚಿತ್ತಾಪುರ ಪಟ್ಟಣಕ್ಕೆ ತೆರಳುತ್ತಿದ್ದ ಬಸ್ ಕಿರಿದಾದ ಕಾಗಿಣಾ ಸೇತುವೆಯಿಂದ ಸ್ಕಿಡ್ ಆಗಿ ಕೆಳಗೆ ಬಿದ್ದಿದೆ. ಸೇತುವೆಯ ಮಧ್ಯದಿಂದ ಬಿದ್ದಿದ್ದರೆ ಅಪಾರ ಪ್ರಮಾಣದ ಪ್ರಾಣಹಾನಿ ಸಂಭವಿಸುವ ಸಾಧ್ಯತೆ ಇತ್ತು. ಆದರೆ ಸೇತುವೆ ಹತ್ತುವಾಗ ಬಸ್ ಬಲಭಾಗದ ಗದ್ದೆಗೆ ಬಿದ್ದಿದೆ.

ಬಸ್ಸಿನಲ್ಲಿದ್ದ ಪ್ರಯಾಣಿಕರು ಕಿಟಕಿ ಗಾಜುಗಳನ್ನು ಒಡೆದು ಹೊರಗೆ ಬಂದಿದ್ದಾರೆ. ಸ್ಥಳದಲ್ಲಿದ್ದ ವಿವಿಧ ವಾಹನಗಳ ಸಾರ್ವಜನಿಕರು ಪ್ರಯಾಣಿಕರ ನೆರವಿಗೆ ಧಾವಿಸಿದರು. ಶಹಾಬಾದ್ ಮೂಲದ ಬಸ್ ಚಾಲಕ ಶಂಕರ್ ಮತ್ತು ಕಂಡಕ್ಟರ್ ಶ್ರೀನಿವಾಸ್ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಶಹಾಬಾದ ಸಿಪಿ ರಾಘವೇಂದ್ರ ಎಸ್, ಪಿಎಸ್ಐ ಅಶೋಕ ಪಾಟೀಲ ಹಾಗೂ ಸಿಬ್ಬಂದಿ ಭೇಟಿ ನೀಡಿ ಗಾಯಾಳುಗಳನ್ನು ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಬಸ್ ಪಲ್ಟಿಯಾಗಲು ನಿಖರವಾದ ಕಾರಣ ಇನ್ನೂ ಪತ್ತೆಯಾಗಿಲ್ಲ.

Sneha Gowda

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

3 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

4 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

4 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

4 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

5 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

5 hours ago