News Karnataka Kannada
Tuesday, April 30 2024
ಕಲಬುರಗಿ

ಕಲ್ಯಾಣ ಕರ್ನಾಟಕ ಭಾಗದವರಿಗೆ ಗುಡ್ ನ್ಯೂಸ್ : 51 ಫೆಲೋಗಳ ನೇಮಕಾತಿ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿದ ವಿಚಾರವಾಗಿ  ಗ್ರಾಮೀಣಾಭಿವೃದ್ಧಿ, ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ಪಕ್ಷದಿಂದ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ದೂರು ಸಲ್ಲಿಸಲಾಗಿದೆ.
Photo Credit : News Kannada

ಕಲಬುರಗಿ: ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಸ್ಥಳೀಯ ಆಡಳಿತ ಬಲವರ್ಧನೆಗಾಗಿ ‘ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್’ ಘೋಷಣೆ ಮಾಡಿದ್ದು ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಪ್ರತಿ ತಾಲೂಕಿಗೆ ಒಬ್ಬರಂತೆ ಒಟ್ಟು 51 ಫೆಲೋಗಳನ್ನು ನೇಮಕ ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಸಚಿವರು ಪ್ರಬುದ್ಧ ಸಮಾಜ ನಿರ್ಮಿಸುವಲ್ಲಿ ನಮ್ಮ ಪ್ರಯತ್ನ ನಿರಂತರವಾಗಿರಲಿದ್ದು, ನಿಮ್ಮೆಲ್ಲರ ಸಲಹೆ ಸಹಕಾರ ನಮಗೆ ದೊಡ್ಡ ಶಕ್ತಿ ನೀಡಿದೆ. ಕರ್ನಾಟಕವನ್ನು ಮಾದರಿ ರಾಜ್ಯವನ್ನಾಗಿಸಲು ನಮ್ಮ ಸರ್ಕಾರ ಬದ್ದವಾಗಿದೆ. ಜೊತೆಗೆ ನಾಡಿನ ಜನರ ವಿಶ್ವಾಸವನ್ನು ಉಳಿಸಿಕೊಂಡು ನುಡಿದಂತೆ ನಡೆಯುತ್ತಿದ್ದೇವೆ ಎಂದಿದ್ದಾರೆ.

ಕಲಬುರಗಿ ಜಿಲ್ಲೆಯ 1,44,496 ರೈತರಿಗೆ ₹28.67 ಕೋಟಿ ಬೆಳೆ ನಷ್ಟ ಪರಿಹಾರ ಮಂಜೂರು ಮಾಡಲಾಗಿದ್ದು, ರೈತರ ಬ್ಯಾಂಕ್ ಖಾತೆಗಳಿಗೆ ಹಣ ಜಮೆ ಮಾಡಲಾಗಿದೆ. ಕಲಬುರಗಿ ನಗರದಲ್ಲಿ 2022-23ನೇ ಸಾಲಿನಲ್ಲಿ ಕೆಕೆಆರ್ಡಿಬಿ ಮೆಗಾ ಮ್ಯಾಕ್ರೋ ಅನುದಾನಡಿಯಲ್ಲಿ ಒಟ್ಟು 39 ಅಂಗನವಾಡಿ ಕೇಂದ್ರಗಳು ಮಂಜೂರಾಗಿದ್ದು, ₹18 ಲಕ್ಷ ವೆಚ್ಚದಲ್ಲಿ ವಿಶೇಷ ಸೌಲಭ್ಯವುಳ್ಳ ಅಂಗನವಾಡಿ ಕೇಂದ್ರಗಳ ಸ್ಥಾಪನೆ ಮಾಡಲಾಗುತ್ತಿದೆ ಎಂದರು.

ಗ್ರಾಮ ಪಂಚಾಯತಿ ಕಚೇರಿಯ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಆದಾಯ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ನಿವಾಸಿ ದೃಢೀಕರಣ ಪತ್ರ ಸೇರಿದಂತೆ ಒಂದೇ ಸೂರಿನಡಿ ಬರೋಬ್ಬರಿ 72 ಸೇವೆಗಳು ದೊರೆಯುವಂತೆ ಅವಕಾಶ ನೀಡಲಾಗಿದೆ.ವಿಶ್ವಗುರು ಬಸವಣ್ಣ ನವರನ್ನು “ಕರ್ನಾಟಕದ ಸಾಂಸ್ಕೃತಿಕ ನಾಯಕ” ರೆಂದು ಘೋಷಿಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮನವಿ ಮಾಡಲಾಗಿತ್ತು. ಸಚಿವ ಸಂಪುಟದಲ್ಲಿ ಈ ಮನವಿಗೆ ಸಮ್ಮತಿ ದೊರೆತಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು