News Karnataka Kannada
Wednesday, May 15 2024
ಕಲಬುರಗಿ

ಶಾರ್ಟ್ ಸರ್ಕ್ಯೂಟ್‌ನಿಂದ ಅಗರಬತ್ತಿ ಫ್ಯಾಕ್ಟರಿ ಬೆಂಕಿಗಾಹುತಿ

ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅಗರಬತ್ತಿ ಫ್ಯಾಕ್ಟರಿ ಧಗಧಗನೇ ಹೊತ್ತಿ ಉರಿದ ಘಟನೆ ಕಲಬುರಗಿಯಲ್ಲಿ ನಡೆದಿದೆ.ಕೈಲಾಸ ನಗರದಲ್ಲಿನ ಅಗರಬತ್ತಿ ಫ್ಯಾಕ್ಟರಿಯಲ್ಲಿ ಅಗ್ನಿ ಅನಾಹುತ ನಡೆದಿದ್ದು ಅಮಾವಾಸ್ಯೆ ನಿಮ್ಮಿತ್ತ ಇಂದು ಫ್ಯಾಕ್ಟರಿ ಬಂದ್ ಮಾಡಲಾಗಿತ್ತು.
Photo Credit : News Kannada

ಕಲಬುರಗಿ: ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅಗರಬತ್ತಿ ಫ್ಯಾಕ್ಟರಿ ಧಗಧಗನೇ ಹೊತ್ತಿ ಉರಿದ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಕೈಲಾಸ ನಗರದಲ್ಲಿನ ಅಗರಬತ್ತಿ ಫ್ಯಾಕ್ಟರಿಯಲ್ಲಿ ಅಗ್ನಿ ಅನಾಹುತ ನಡೆದಿದ್ದು ಅಮಾವಾಸ್ಯೆ ನಿಮ್ಮಿತ್ತ ಫ್ಯಾಕ್ಟರಿ ಬಂದ್ ಮಾಡಲಾಗಿತ್ತು.

ಈ ಹಿನ್ನಲೆ ಅದೃಷ್ಟವಷಾತ್ ಯಾರಿಗೂ ಏನೂ ಆಗಿಲ್ಲ. ಮಧ್ಯಾನ 1.30 ಕ್ಕೆ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ಇಡೀ ಫ್ಯಾಕ್ಟರಿಗೆ ವ್ಯಾಪಿಸಿತು. ಚಂದ್ರಶೇಖರ್ ಎಂಬುವರಿಗೆ ಸೇರಿರೋ ಈ ಫ್ಯಾಕ್ಟರಿ ಅಗ್ನಿ ಅವಘಢದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಅಗರಬತ್ತಿ ಸುಟ್ಟು ಭಸ್ಮವಾಗಿವೆ.

ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ಆಗಮಿಸೋ ಹೊತ್ತಿಗೆ ಎಲ್ಲವೂ ಭಸ್ಮವಾಗಿತ್ತು. ಆರ್‌ಜೆ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು