News Karnataka Kannada
Monday, April 29 2024
ಕಲಬುರಗಿ

ಪ್ರಿಯಾಂಕ್ ಖರ್ಗೆ ವಿರುದ್ಧ ಸ್ಪರ್ಧಿಸಿದ್ದ ಬಿಜೆಪಿ ಮುಖಂಡನ ಗಡಿಪಾರಿಗೆ ಪ್ರಸ್ತಾವನೆ

ವಿಧಾನಸಭಾ ಚುನಾವಣೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸ್ಪರ್ಧಿಸಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ. ಗಡಿಪಾರು ಆದೇಶಕ್ಕೂ ಮುನ್ನ ಇಂದು ವಿಚಾರಣೆಗೆ ಹಾಜರಾಗಲು ಕಲಬುರಗಿ ನಗರ ಪೊಲೀಸ್ ಇಲಾಖೆ ಮಣಿಕಂಠ ರಾಠೋಡ್‌‌ಗೆ ನೋಟಿಸ್ ನೀಡಲಾಗಿದೆ.
Photo Credit : News Kannada

ಕಲಬುರಗಿ: ವಿಧಾನಸಭಾ ಚುನಾವಣೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸ್ಪರ್ಧಿಸಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ. ಗಡಿಪಾರು ಆದೇಶಕ್ಕೂ ಮುನ್ನ ಇಂದು ವಿಚಾರಣೆಗೆ ಹಾಜರಾಗಲು ಕಲಬುರಗಿ ನಗರ ಪೊಲೀಸ್ ಇಲಾಖೆ ಮಣಿಕಂಠ ರಾಠೋಡ್‌‌ಗೆ ನೋಟಿಸ್ ನೀಡಲಾಗಿದೆ.

ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಂಗ್ರಹ, ಸಾರ್ವಜನಿಕ ಶಾಂತಿಗೆ ಭಂಗ ತರುವುದು, ಸಾರ್ವಜನಿ ಆಸ್ತಿಗೆ ಹಾನಿಯುಂಟು ಮಾಡುವ ಸಾಧ್ಯತೆ ಇರೋದ್ರಿಂದ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಗಡಿಪಾರು ವಿಚಾರ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಮಣಿಕಂಠ್ ರಾಠೋಡ್ ಮಧ್ಯೆ ಮತ್ತೊಂದು ಸುತ್ತಿನ ಸಂಘರ್ಷಕ್ಕೆ ಕಾರಣವಾಗುತ್ತಾ ಅನ್ನೋ ಚರ್ಚೆಗಳು ಶುರುವಾಗಿವೆ.

2022 ರಲ್ಲಿ ಮಣಿಕಂಠ್ ರಾಠೋಡ್‌ರನ್ನ ಗಡಿಪಾರು ಮಾಡಲಾಗಿತ್ತು. ಗಡಿಪಾರು ಆದೇಶದ ವಿರುದ್ಧ ಹೈಕೋರ್ಟ್ ಪೀಠ ತಡೆಯಾಜ್ಞೆ ನೀಡಿತ್ತು.

ಬಿಜೆಪಿ ಮುಖಂಡ ಮಣಿಕಂಠ ರಾಥೋಡ್ ಈ ಹಿಂದೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು. ಮಣಿಕಂಠ ರಾಠೋಡ್ ಮೇಲೆ 40ಕ್ಕೂ ಹೆಚ್ಚು ಪ್ರಕರಣಗಳಿದ್ದು, ಈ ಹಿಂದೆ ಚುನಾವಣೆ ಸಂದರ್ಭದಲ್ಲಿ ಖರ್ಗೆ ಕುಟುಂಬಕ್ಕೆ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದರು.

ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲಿನ ಹಲ್ಲೆಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಶಹಬಾದ್ ಪೊಲೀಸರು, ಅಪಘಾತದ ವಿಷಯ ತಿಳಿದಿದೆ. ನವೆಂಬರ್ 18ರಂದು ಮಣಿಕಂಠ ರಾಠೋಡ್ ಇನ್ನೋವಾ ಕ್ರೇಸ್ಟಾ ವೈಟ್ ಕಲರ್ ಕಾರು ಯಾದಗಿರಿ ಜಿಲ್ಲೆಯ ಚೆಪಟ್ಲಾ ಮರಕ್ಕೆ ಡಿಕ್ಕಿ ಹೊಡೆದಿತ್ತು. ಮರಕ್ಕೆ ಡಿಕ್ಕಿ ಹೊಡೆದ ಹಿನ್ನಲೆ‌ ಕಾರಿನಲ್ಲಿದ್ದ ಮಣಿಕಂಠ ರಾಠೋಡ್ ಗಾಯಗೊಂಡಿದ್ದರು. ಗಾಯಗೊಂಡ ಮಣಿಕಂಠ ರಾಠೋಡ್ ತನ್ನ ಮತ್ತೊಂದು ಕಾರಿನಲ್ಲಿ ಕಲಬುರಗಿಯತ್ತ ಪ್ರಯಾಣ ಮಾಡಿದ್ದರು. ನಂತರ ಅಲ್ಲಿಂದ ಕಲಬುರಗಿಯಿಂದ ಚಿತ್ತಾಪುರಕ್ಕೆ ಬಂದ ಮಣಿಕಂಠ ರಾಠೋಡ್ ಮಾರ್ಗ ಮಧ್ಯೆ ಹಲ್ಲೆ ನಡೆದಿರೋ ಕಥೆ ಹೇಳಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು