ಕಲಬುರಗಿ

ಪ್ರಿಯಾಂಕ್ ಖರ್ಗೆ ವಿರುದ್ಧ ಸ್ಪರ್ಧಿಸಿದ್ದ ಬಿಜೆಪಿ ಮುಖಂಡನ ಗಡಿಪಾರಿಗೆ ಪ್ರಸ್ತಾವನೆ

ಕಲಬುರಗಿ: ವಿಧಾನಸಭಾ ಚುನಾವಣೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸ್ಪರ್ಧಿಸಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ. ಗಡಿಪಾರು ಆದೇಶಕ್ಕೂ ಮುನ್ನ ಇಂದು ವಿಚಾರಣೆಗೆ ಹಾಜರಾಗಲು ಕಲಬುರಗಿ ನಗರ ಪೊಲೀಸ್ ಇಲಾಖೆ ಮಣಿಕಂಠ ರಾಠೋಡ್‌‌ಗೆ ನೋಟಿಸ್ ನೀಡಲಾಗಿದೆ.

ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಂಗ್ರಹ, ಸಾರ್ವಜನಿಕ ಶಾಂತಿಗೆ ಭಂಗ ತರುವುದು, ಸಾರ್ವಜನಿ ಆಸ್ತಿಗೆ ಹಾನಿಯುಂಟು ಮಾಡುವ ಸಾಧ್ಯತೆ ಇರೋದ್ರಿಂದ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಗಡಿಪಾರು ವಿಚಾರ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಮಣಿಕಂಠ್ ರಾಠೋಡ್ ಮಧ್ಯೆ ಮತ್ತೊಂದು ಸುತ್ತಿನ ಸಂಘರ್ಷಕ್ಕೆ ಕಾರಣವಾಗುತ್ತಾ ಅನ್ನೋ ಚರ್ಚೆಗಳು ಶುರುವಾಗಿವೆ.

2022 ರಲ್ಲಿ ಮಣಿಕಂಠ್ ರಾಠೋಡ್‌ರನ್ನ ಗಡಿಪಾರು ಮಾಡಲಾಗಿತ್ತು. ಗಡಿಪಾರು ಆದೇಶದ ವಿರುದ್ಧ ಹೈಕೋರ್ಟ್ ಪೀಠ ತಡೆಯಾಜ್ಞೆ ನೀಡಿತ್ತು.

ಬಿಜೆಪಿ ಮುಖಂಡ ಮಣಿಕಂಠ ರಾಥೋಡ್ ಈ ಹಿಂದೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು. ಮಣಿಕಂಠ ರಾಠೋಡ್ ಮೇಲೆ 40ಕ್ಕೂ ಹೆಚ್ಚು ಪ್ರಕರಣಗಳಿದ್ದು, ಈ ಹಿಂದೆ ಚುನಾವಣೆ ಸಂದರ್ಭದಲ್ಲಿ ಖರ್ಗೆ ಕುಟುಂಬಕ್ಕೆ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದರು.

ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲಿನ ಹಲ್ಲೆಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಶಹಬಾದ್ ಪೊಲೀಸರು, ಅಪಘಾತದ ವಿಷಯ ತಿಳಿದಿದೆ. ನವೆಂಬರ್ 18ರಂದು ಮಣಿಕಂಠ ರಾಠೋಡ್ ಇನ್ನೋವಾ ಕ್ರೇಸ್ಟಾ ವೈಟ್ ಕಲರ್ ಕಾರು ಯಾದಗಿರಿ ಜಿಲ್ಲೆಯ ಚೆಪಟ್ಲಾ ಮರಕ್ಕೆ ಡಿಕ್ಕಿ ಹೊಡೆದಿತ್ತು. ಮರಕ್ಕೆ ಡಿಕ್ಕಿ ಹೊಡೆದ ಹಿನ್ನಲೆ‌ ಕಾರಿನಲ್ಲಿದ್ದ ಮಣಿಕಂಠ ರಾಠೋಡ್ ಗಾಯಗೊಂಡಿದ್ದರು. ಗಾಯಗೊಂಡ ಮಣಿಕಂಠ ರಾಠೋಡ್ ತನ್ನ ಮತ್ತೊಂದು ಕಾರಿನಲ್ಲಿ ಕಲಬುರಗಿಯತ್ತ ಪ್ರಯಾಣ ಮಾಡಿದ್ದರು. ನಂತರ ಅಲ್ಲಿಂದ ಕಲಬುರಗಿಯಿಂದ ಚಿತ್ತಾಪುರಕ್ಕೆ ಬಂದ ಮಣಿಕಂಠ ರಾಠೋಡ್ ಮಾರ್ಗ ಮಧ್ಯೆ ಹಲ್ಲೆ ನಡೆದಿರೋ ಕಥೆ ಹೇಳಿದ್ದರು.

Ashika S

Recent Posts

ಬ್ಯಾಂಕ್ ಗಳು ಒತ್ತಾಯಪೂರ್ವಕವಾಗಿ ಸಾಲ ವಸೂಲಿ ಮಾಡಬೇಡಿ: ಡಿಸಿ

ತೀವ್ರ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದು, ಬ್ಯಾಂಕುಗಳು ಒತ್ತಾಯ ಪೂರ್ವಕವಾಗಿ ರೈತರಿಂದ ಸಾಲ ವಸೂಲಿ ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ…

6 hours ago

ಕೇರಳದ 9 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಇಂದಿನಿಂದ ಮುಂದಿನ ಮಂಗಳವಾರದವರೆಗೆ ಕೇರಳದ  ಬಹುತೇಕ ಭಾಗಗಳಲ್ಲಿ  ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.

6 hours ago

ಕೇರಳದಲ್ಲಿ ವೆಸ್ಟ್ ನೈಲ್ ಜ್ವರ: ಬಾವಲಿ ಚೆಕ್ ಪೋಸ್ಟ್ ನಲ್ಲಿ ಕಟ್ಟೆಚ್ಚರ

ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಮೈಸೂರು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಕಟ್ಟೆಚ್ಚರ ವಹಿಸಲಾಗಿದ್ದು, ಕೇರಳದಿಂದ ಆಗಮಿಸುವವರತ್ತ ನಿಗಾವಹಿಸಲಾಗುತ್ತಿದೆ.

6 hours ago

ಬಿರುಗಾಳಿಯೊಂದಿಗೆ ಸುರಿದ ಮಳೆ: ಮಾವು, ಪಪ್ಪಾಯಿ ಬೆಳೆಗೆ ಹಾನಿ

ತಾಲ್ಲೂಕಿನ ವಿವಿಧೆಡೆ ಮಂಗಳವಾರ ಬಿರುಗಾಳಿಯೊಂದಿಗೆ ಸುರಿದ ಮಳೆಗೆ ಮಾವು ಹಾಗೂ ಪಪ್ಪಾಯಿ ಬೆಳೆಗೆ ಹಾನಿ ಉಂಟಾಗಿದೆ.

7 hours ago

ಚಾಮರಾಜನಗರ: ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವು

ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ   ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.

7 hours ago

ಸಾಮಾನ್ಯ ಪ್ರಯಾಣಿಕರಂತೆ ಟಿಕೆಟ್‌ ಪಡೆದು ಬಸ್‌ನಲ್ಲಿ ಸಂಚರಿಸಿದ ನ್ಯಾಯಾಧೀಶ

ನಗರದಿಂದ ಸಿದ್ಧೇಶ್ವರ ಮಾರ್ಗವಾಗಿ ಭಾಲ್ಕಿಗೆ ಬಸ್ ಓಡಿಸಬೇಕೆಂಬ ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಿದೆ.

7 hours ago