Categories: ಕಲಬುರಗಿ

ಬಿಜೆಪಿ ಕಾರ್ಯಕರ್ತನ ಪ್ರಕರಣಕ್ಕೆ ತಿರುವು: ಸಾಲಬಾಧೆಯಿಂದ ಆತ್ಮಹತ್ಯೆ ಎಂದು ದೂರು ದಾಖಲು

ಕಲಬುರಗಿ: ಸೇಡಂ ತಾಲೂಕಿನ ಶಿರೋಳ್ಳಿ ಗ್ರಾಮದ ಶಿವಕುಮಾರ ಆತ್ಮಹತ್ಯೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ʼಆತ್ಮಹತ್ಯೆಗೆ ಸಾಲದ ಹೊರೆ ಕಾರಣವಾಗಿದೆʼ ಎಂದು ಕುಟುಂಸ್ಥರು ಸುಲೆಪೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇತ್ತ ʼಶಿವಕುಮಾರ ಪೂಜಾರಿ ಬಿಜೆಪಿ ಮುಖಂಡರಾಗಿದ್ದು, ಆತ್ಮಹತ್ಯೆಗೆ ಮಾಜಿ ಸಚಿವ ಶರಣ ಪ್ರಕಾಶ್ ಪಾಟೀಲ್ ರ ಬೆಂಬಲಿಗರು ಕಾರಣʼ ಎಂದು ಸೇಡಂ ಕ್ಷೇತ್ರದ ಬಿಜೆಪಿ ಮುಖಂಡ, ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೆಲ್ಲೂಕುರ್ ಅವರು ಆಡಿಯೋ ಬಿಡುಗಡೆ ಮಾಡಿ ಗಂಭೀರ ಆರೋಪ ಮಾಡಿದ್ದರು.ಗುರುವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವ ಶಿವಕುಮಾರ್ ಅವರ ಕುಟುಂಬಸ್ಥರು ಸುಲೆಪೇಟ್ ಪೊಲೀಸ್ ಠಾಣೆಯಲ್ಲಿ ಸಾಲ ಬಾಧೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರು ದಾಖಲಿಸಿದ್ದು, ಕೆಜಿಬಿ ಬ್ಯಾಕ್ ನಿಂದ 70 ಸಾವಿರ ಸಾಲ ಸೇರಿದಂತೆ 10-12 ಲಕ್ಷ ಸಾಲ ಪಡೆದಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಾವಿನ ಬಗ್ಗೆ ನಮಗೆ ಯಾರ ಮೇಲೂ ಯಾವುದೇ ಸಂಶಯವಿಲ್ಲʼʼ ಎಂದು ಪ್ರಕರಣ ದಾಖಲಿಸಿದ್ದಾರೆ.

ಇತ್ತ ಬಿಜೆಪಿ ನಾಯಕರು “ಶಿವಕುಮಾರ ಆತ್ಮಹತ್ಯೆಗೆ ಕಾಂಗ್ರೆಸ್ ಕಾರ್ಯಕರ್ತರು ಕಾರಣ. ಕಾಂಗ್ರೆಸ್ ಜಿಲ್ಲೆಯಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರ ಮೇಲೆ ದಾಳಿ ಮತ್ತು ದೌರ್ಜನ್ಯಗಳು ನಡೆಸಲಾಗುತ್ತಿದೆ” ಎಂದು ಆರೋಪಿಸಿ ಹೋರಾಟಕ್ಕೆ ಬಿಜೆಪಿ ಪಕ್ಷದ ನಾಯಕರು ತಯಾರಿ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆತ್ಮಹತ್ಯೆ ಮಾಡಿಕೊಂಡ ಶಿವಕುಮಾರ್ ತಾಯಿ ಸುಶೀಲಾಬಾಯಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, “ಆತ್ಮಹತ್ಯೆ ಯಾಕೆ ಮಾಡಿಕೊಂಡಿದ್ದಾನೆ ಎಂದು ನನಗೆ ಗೋತ್ತಿಲ್ಲ. ನಸುಕಿನ ಜಾವ 4:30 ಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನನ್ನ ಮಗ ಸಾಲ ಮಾಡಿಕೊಂಡಿದ್ದ. ಆದರೆ, ಎಷ್ಟು ಸಾಲ ಎಂದು ನಮಗೂ ಹೇಳಿಲ್ಲ. ಸಚಿವ ಶರಣಪ್ರಕಾಶ್ ಹೆಸರು ಹೇಳಿರುವ ಆಡಿಯೋ ಬಗ್ಗೆ ಗೊತ್ತಿಲ್ಲ. ನಾವು ಅತ್ತೆ ಸೊಸೆ ಮನೆಯಲ್ಲಿ ಇರುತ್ತೇವೆ. ಹಾಗಾಗಿ ಯಾವುದೇ ಗಲಾಟೆ ಬಗ್ಗೆ ನಮಗೆ ಗೊತ್ತಿಲ್ಲ” ಎಂದು ಸ್ಪಷ್ಟಪಡಿಸಿದರು. “ರೈತ ಶಿವಕುಮಾರ ಅವರು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರ ಹೆಸರು ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಬೇಕು. ಇಲ್ಲವಾದರೆ ಸಿಬಿಐಗೆ ಶಿಫಾರಸು ಮಾಡಬೇಕು” ಎಂದು ಕೇಂದ್ರ ಸಚಿವ ಭಗವಂತ ಖೂಬಾ ಒತ್ತಾಯಿಸಿದ್ದರು.

Gayathri SG

Recent Posts

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

2 mins ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

31 mins ago

ರಸ್ತೆಯಲ್ಲಿ ಸಿಕ್ಕಿದ್ದ ಪೆನ್‌ಡ್ರೈವ್ ಅನ್ನು ಶಾಸಕ ಎ.ಮಂಜುಗೆ ಕೊಟ್ಟಿದ್ದೆ: ನವೀನ್ ಗೌಡ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ಹಂಚಿಕೆ ಆರೋಪ ಎದುರಿಸುತ್ತಿರುವ ನವೀನ್ ಗೌಡ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿರುವ ಪೋಸ್ಟ್ ಭಾರೀ…

48 mins ago

ಡಿಫರೆಂಟ್ ಗೆಟಪ್‌ನಲ್ಲಿ ಎಂಟ್ರಿ ಕೊಟ್ಟ ನಟ ಮಿತ್ರ

ಕನ್ನಡದ ಹಾಸ್ಯನಟ ಮಿತ್ರ ಇದೀಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.

1 hour ago

ಶೀಘ್ರದಲ್ಲೇ ಎರ್ನಾಕುಲಂನಿಂದ ಬೆಂಗಳೂರಿಗೆ ವಂದೇ ಭಾರತ್ ಆರಂಭ

ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.

2 hours ago

ಅಂಬೇಡ್ಕರ್ ಜಯಂತೋತ್ಸವದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133ನೇ ಜಯಂತೋತ್ಸವ ಅಂಗವಾಗಿ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ವಿಮೋಚನಾ ಯುವಕರ ಸಂಘದ…

2 hours ago