News Karnataka Kannada
Friday, May 03 2024
ಕಲಬುರಗಿ

ಲೋಕಸಭೆಗೆ ಸನ್ನದರಾಗಲೂ ಬ್ಲಾಕ್ ಕಾಂಗ್ರೆಸ್ ಸಭೆ

ತಾಲೂಕಿನ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮುಂಬರುವ ಲೋಕಸಭಾ ಚುನಾವಣಾ ನಿಮಿತ್ತ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಪದಾಧಿಕಾರಿಗಳ ಪೂರ್ವಭಾವಿ ಸಭೆ ನಡೆಯಿತು.
Photo Credit : News Kannada

ಅಫಜಲಪುರ: ತಾಲೂಕಿನ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮುಂಬರುವ ಲೋಕಸಭಾ ಚುನಾವಣಾ ನಿಮಿತ್ತ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಪದಾಧಿಕಾರಿಗಳ ಪೂರ್ವಭಾವಿ ಸಭೆ ನಡೆಯಿತು.

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಶತಾಯ ಗತಾಯ ಅಫಜಲಪುರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಹೆಚ್ಚಿನ ಮತಗಳನ್ನು ನೀಡಲು ಶ್ರಮವಹಿಸಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ ಪೂಜಾರಿ ಕಾರ್ಯಕರ್ತರಿಗೆ ತಿಳಿಸಿದರು.

ಕಳೆದ ಲೋಕಸಭಾ ಚುನಾವಣೆಯ ಕಹಿ ನೆನಪು ಮತ್ತೆ ಮರುಕಳುಹಿಸದಂತೆ ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು.ಅದಲ್ಲದೇ ಬೂತ್ ಮಟ್ಟದಿಂದ ಪಕ್ಷ ಸಂಘಟನೆಗೆ ನಾವೆಲ್ಲರೂ ಮುಂದಾಗಬೇಕು ಎಂದರು.

ನಂತರ ಮಾತನಾಡಿದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ತಾಲೂಕು ಅಧ್ಯಕ್ಷ ಮಹಾಲಿಂಗ ಅಂಗಡಿ ಈ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾರೆ ಆದರೂ ನಾವು ಗೆಲ್ಲಿಸುವ ನಿಟ್ಟಿನಲ್ಲಿ ಕೆಲಸ ಮಾಡೊಣ. ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇರುವುದರಿಂದ ಲೋಕಸಭೆ ಎದುರಿಸಲು ನಮಗೆ ಸುಲಭ ಆಗಬಹುದು. ಯಾಕೆಂದರೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ನೀಡುವ ಹತ್ತು ಹಲವು ಯೋಜನೆಗಳು ಜನೋಪಕಾರಿಯಾಗಿದ್ದು, ಅವುಗಳು ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಲು ಸಹಾಯ ಮಾಡುತ್ತವೆ ಎಂದರು.

ಸಭೆಯಲ್ಲಿ ಕಾಂಗ್ರೆಸ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರಾಜ್ಯ ಉಪಾಧ್ಯಕ್ಷ ಕನಿರಾಮ ರಾಠೋಡ, ಜಿಲ್ಲಾ ಅಧ್ಯಕ್ಷ ಮಾಹಾಂತೇಶ,ಸಂಗಾವಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ತಾಲೂಕು ಅಧ್ಯಕ್ಷ ಮಾಹಾಲಿಂಗ ಅಂಗಡಿ, ಅನುಸುಯಾ ಸೂಲೇಕರ, ಶಿವುಸಿಂಗೆ, ಆನಂದ ರಾಠೋಡ,ಜೈ ಭೀಮ್ ಅಳಗಿ, ಮಾಳು ದೊಡಮನಿ ಮತ್ತಿತರ ಭಾಗಿಯಾಗಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು