News Karnataka Kannada
Sunday, April 28 2024
ಕಲಬುರಗಿ

ಕಲಬುರಗಿಯಲ್ಲಿ ಕ್ರಿಟಿಕಲ್ ಕೇರ್ ಯೂನಿಟ್ ಸ್ಥಾಪನೆ : ಸಚಿವ ಡಾ.ಶರಣಪ್ರಕಾಶ ಪಾಟೀಲ

Critical Care Unit To Be Set Up In Kalaburagi: Minister Dr Sharanaprakash Patil
Photo Credit : News Kannada

ಕಲಬುರಗಿ: ಕಲಬುರಗಿಯ ಜಿಮ್ಸ್ ಆವರಣದಲ್ಲಿ ಸುಮಾರು 50 ಕೋಟಿ ರೂ. ವೆಚ್ಚದಲ್ಲಿ ಕ್ರಿಟಿಕಲ್ ಕೇರ್ ಯೂನಿಟ್ ಸ್ಥಾಪಿಸಲಾಗುವುದು ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ ಪಾಟೀಲ ಹೇಳಿದರು.

ಮಂಗಳವಾರ ಕಲಬುರಗಿ ನಗರದ ಕರ್ನಾಟಕ-ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆ.ಜಿ.ಟಿ.ಟಿ.ಐ)ಗೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ತುರ್ತಾಗಿ ಸ್ಪಂದಿಸಬೇಕಾದ ರೋಗಿಗಳಿಗೆ ಈ ಘಟಕದಿಂದ ಅಗತ್ಯ ವೈದ್ಯಕೀಯ ನೆರವು ಸಿಗಲಿದೆ. ಇದರಲ್ಲಿ ಸುಟ್ಟ ಗಾಯಗಳ ಘಟಕ ಸಹ ಸೇರಿದೆ. ಮುಂದಿನ 2 ವರ್ಷದಲ್ಲಿ ಈ ಘಟಕ ಜಿಮ್ಸ್ ಆವರಣದಲ್ಲಿಯೇ ಪ್ರತ್ಯೇಕವಾಗಿ ಸ್ಥಾಪನೆಯಾಗಲಿದೆ ಎಂದರು.

ಪ್ರಸಕ್ತ 2023-24ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ 70 ಕೋಟಿ ರೂ. ವೆಚ್ಚದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ನಿರ್ಮಿಸಲಾಗುವುದು. ಜಯದೇವ ಆಸ್ಪತ್ರೆಯಂತೆ ಈ ಆಸ್ಪತ್ರೆ ಸಹ 371 ಹಾಸಿಗೆ ಬ್ರ್ಯಾಂಡ್‍ನೊಂದಿಗೆ ಗುರುತಿಸಿಕೊಳ್ಳಲಿದೆ. ಪ್ರಸುತ ಹಳೇ ಜಿಲ್ಲಾ ಆಸ್ಪತ್ರೆ ಕೆಡವಿ ಅಲ್ಲಿ ಈ ಹೊಸ ಕಟ್ಟಡ ನಿರ್ಮಿಸಲಾಗುವುದು. ಈಗಾಗಲೆ ನೀಲಿ ನಕ್ಷೆ ತಯಾರಿದ್ದು, ಡಿ.ಪಿ.ಆರ್. ಸಿದ್ಧಗೊಳ್ಳುತ್ತಿದೆ. ಮುಂದಿನ 2 ವರ್ಷದಲ್ಲಿ ಇದನ್ನು ನಿರ್ಮಿಸಲಾಗುವುದು ಎಂದು ಡಾ. ಶರಣಪ್ರಕಾಶ ಪಾಟೀಲ ಮಾಹಿತಿ ನೀಡಿದರು.

ರಸ್ತೆ ಅಪಘಾತದಂತಹ ಪ್ರಕರಣದಲ್ಲಿ ತುರ್ತಾಗಿ ಚಿಕಿತ್ಸೆ ನೀಡಲು ಕಲಬುರಗಿ ಜಿಮ್ಸ್ ಆವರಣದಲ್ಲಿ ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಟ್ರಾಮಾ ಸೆಂಟರ್ ನಿರ್ಮಿಸಲಾಗಿತ್ತಾದರೂ, ಅಗತ್ಯ ವೈದ್ಯಕೀಯ ಉಪಕರಣಗಳು ಇಲ್ಲದ ಕಾರಣ ಸೇವೆ ಆರಂಭಿಸಿರಲಿಲ್ಲ. ಇದೀಗ ನಮ್ಮ ಸರ್ಕಾರ ಬಂದ ಕೂಡಲೆ ಸೆಂಟರ್ ಕಾರ್ಯಾಚರಣೆಗೆ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದು, ಮುಂದಿನ ಒಂದು ತಿಂಗಳಿನಲ್ಲಿ ಟ್ರಾಮಾ ಸೆಂಟರ್ ರೋಗಿಗಳ ಸೇವೆಗೆ ಲಭ್ಯವಾಗಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು