News Karnataka Kannada
Monday, May 06 2024
ಕಲಬುರಗಿ

ದೇವಾನಂದ ಆತ್ಮಹತ್ಯೆ ಪ್ರಕರಣ: ಆರೋಪಿಗಳ ಬಂಧನಕ್ಕೆ ಆಗ್ರಹ

Devanand suicide case: Demand for arrest of accused
Photo Credit : News Kannada

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಕಲಗುರ್ತಿ ಗ್ರಾಮದ ದೇವಾನಂದ ರಾಮಚಂದ್ರ ಆತ್ಮಹತ್ಯೆ ಪ್ರಕರಣದ ಸೂಕ್ತ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಬೇಕು ಎಂದು ಕರ್ನಾಟಕ ರಾಜ್ಯ ಗಂಗಾಮತಸ್ಥರ ಸಂಘ ಆಗ್ರಹಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಿ.ಮೌಲಾಲಿ, ‘ಕಲಬುರಗಿ ಜಿಲ್ಲೆಯ ಕಲಗುರ್ತಿ ಗ್ರಾಮದ ಹಿಂದುಳಿದ ವರ್ಗಕ್ಕೆ ಸೇರಿದ್ದ ದೇವಾನಂದ ರಾಮಚಂದ್ರ ಕೋರಬಾ ಎಂಬ ಯುವಕ 2023ರ ಜುಲೈ 20ರಂದು ಪೊಲೀಸರ ಕಿರುಕುಳ ತಾಳಲಾರದೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಆತ್ಯಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೂ ಆರೋಪಿಗಳನ್ನು ಬಂಧಿಸದೇ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದಾರೆ’ ಎಂದು ದೂರಿದರು.

‘ಕೋಲಿ/ಕಬ್ಬಲಿಗ ಸಮಾಜದ ದೇವಾನಂದ ರಾಮಚಂದ್ರ ಕೋರಬಾ ಅವರ ಆತ್ಮಹತ್ಯೆಗೆ ಶಿವರಾಜ ಪಾಟೀಲ, ಸಿದ್ದಣ್ಣಗೌಡ ಪಾಟೀಲ, ಅಣ್ಣಪ ಹಡಪದ ಮತ್ತು ಸಿದ್ದು ಅವರು ಕಾರಣವಾಗಿದ್ದು, ಕೂಡಲೇ ಅವರನ್ನು ಬಂಧಿಸಬೇಕು. ಈ ಬಗ್ಗೆ ಹಲವಾರು ಪ್ರತಿಭಟನೆ ಮತ್ತು ಮನವಿಗಳನ್ನು ಸಲ್ಲಿಸಿದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ಸರ್ಕಾರ ಮಧ್ಯಪ್ರವೇಶಿಸಿ ಈ ಪ್ರಕರಣದ ಸೂಕ್ತ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಬೇಕು’ ಎಂದು ಒತ್ತಾಯಿಸಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಮುರಳೀಧರ ಸಿ., ಉಪಾಧ್ಯಕ್ಷರಾದ ಸೀತಾರಾಮ್ ಪಿ.ವಿ., ಮಣ್ಣೂರು ನಾಗರಾಜ್, ಸಂಘಟನಾ ಕಾರ್ಯದರ್ಶಿ ಚಿಕ್ಕತಿಮ್ಮಯ್ಯ ಟಿ.ಎ., ಗುಲಬರ್ಗಾ ಜಿಲ್ಲೆಯ ಸಮನ್ವಯ ಸಮಿತಿಯ ಮುಖಂಡರಾದ ರಮೇಶ ನಾಟೀಕಾರ, ಬಸವರಾಜ ಬೂದಾಳ, ಸಂತೋಷ ತಳವಾರ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು