Categories: ಕಲಬುರಗಿ

ಅಮರಣಾಂತ ಉಪವಾಸ ಸತ್ಯಾಗ್ರಹ: ನಾಟಿಕಾರ ಆರೋಗ್ಯದಲ್ಲಿ ಏರುಪೇರು

ಅಫಜಲಪುರ: ಕಳೆದ ಎಂಟು ದಿನಗಳಿಂದ ಶಿವಕುಮಾರ ನಾಟಿಕಾರ ನೇತೃತ್ವದಲ್ಲಿ ನಡೆಯುತ್ತಿರುವ ಅಮರಣಾಂತ ಉಪವಾಸ ಸತ್ಯಾಗ್ರಹದಲ್ಲಿಂದು ದಿಢೀರನೆ ನಾಟಿಕಾರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದ್ದು,ಕೂಡಲೇ ವಿಜಯಪುರ ಜಿಲ್ಲೆಗೆ ಅಂಬ್ಯುಲೆನ್ಸ್ ಮುಖಾಂತರ ಆಸ್ಪತ್ರೆಗೆ ರವಾನಿಸಲಾಯಿತು.

ಎಂಟು ದಿನಗಳಿಂದ ಶಿವಕುಮಾರ ನಾಟಿಕಾರ ಬರಿ ನೀರು ಕುಡಿದು ತುತ್ತು ಆಹಾರ ಸೇರಿಸದೆ ಪ್ರತಿಭಟನಾ ನಿರತರಾಗಿದ್ದರು. ಜಿಲ್ಲಾ ಅಧಿಕಾರಿಗಳ ತಂಡ ತಾಲೂಕು ಅಧಿಕಾರಿಗಳ ತಂಡ ಸೇರಿದಂತೆ ಜನಪ್ರತಿನಿಧಿಗಳು ಉಪವಾಸ ಸತ್ಯಾಗ್ರಹ ಕೈಬಿಡುವಂತೆ ಕೇಳಿಕೊಂಡರು ಭೀಮಾ ನದಿಗೆ ನೀರು ಹರಿಸುವ ವರೆಗೂ ನಾನು ಆಹಾರ ಸೇವಿಸಲ್ಲ ನನ್ನ ಜನರಿಗಾಗಿ ನನ್ನ ಪ್ರಾಣ ಹೊದರು ಚಿಂತೆ ಇಲ್ಲ. ಭೀಮಾ ನದಿಗೆ ನೀರು ಹರಿ ಬಿಟ್ಟಾಗ ಮಾತ್ರ ಆಹಾರ ಸೇವಿಸುವುದಾಗಿ ಹೇಳುತ್ತಾ ಬಂದಿದ್ದರು.

ಇವತ್ತು ಹಠಾತ್ ಅವರ ಆರೋಗ್ಯದಲ್ಲಿ ಬದಲಾವಣೆಯಾಗಿದ್ದನ್ನು ಗಮನಿಸಿದ ಹೋರಾಟಗಾರರು ಪಕ್ಕದ ವಿಜಯಪುರ ಜಿಲ್ಲಾಸ್ಪತ್ರೆಗೆ ಕರೆದೊಯ್ದರು. ಅಂಬ್ಯುಲೇನ್ಸನಲ್ಲಿ ಅವರನ್ನ ಕರೆದೊಯ್ಯುವ‌ತ್ತಿರುವ ಬೆನ್ನಲ್ಲೇ, ನಾಟಿಕಾರ ಬೆಂಬಲಿಗರ ತಂಡ ಆಕ್ರೋಶ ಭರಿತರಾಗಿ ರಸ್ತೆ ತಡೆದು ಜಿಲ್ಲಾಡಳಿತ ಮತ್ತು ರಾಜ್ಯ ಸರಕಾರದ ವಿರುದ್ದ ಹರಿಹಾಯ್ದರು.

ಸ್ಥಳಕ್ಕೆ ಧಾವಿಸಿದ ಅಫಜಲಪುರ ಠಾಣಾ ಪೊಲೀಸರು ಉದ್ವಿಗ್ನ ವಾತಾವರಣ ತಿಳಿಗೊಳಿಸಿದರು.ಒಂದು ವೇಳೆ ನಾಟಿಕಾರ ಅವರ ಜೀವಕ್ಕೆ ತೊಂದರೆ ಆದರೆ ಅದಕ್ಕೆ ನೇರ ಹೊಣೆ ಜಿಲ್ಲಾಡಳಿತ ಮತ್ತು ರಾಜ್ಯ‌ಸರಕಾರವೇ ಎಂದು ಆಕ್ರೋಶ ವ್ಯಕ್ತಪಡಿಸಿದರು.

Ashika S

Recent Posts

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

3 mins ago

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

35 mins ago

ಡಿ ಬಾಸ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್‌ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…

43 mins ago

ಧಾರವಾಡದ ಪೇಡಾ ಈ ಬಾರಿ ಯಾರ ಬಾಯಿಗೆ ಬೀಳಲಿದೆ?; ಜೋಶಿ ವಿರುದ್ಧ ವಿನ್ ಆಗ್ತಾರಾ ವಿನೋದ್

ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…

45 mins ago

ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ 3 ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರ

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.

1 hour ago

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

1 hour ago