ಕಲಬುರಗಿ: ಚಾಕು ತೋರಿಸಿ ಅಪ್ರಾಪ್ತ ಬಾಲಕಿಯ ಮೇಲೆ ಇಬ್ಬರು ಅಪ್ರಾಪ್ತ ಬಾಲಕರು ಅತ್ಯಾಚಾರ ಎಸಗಿರುವ ಭಯಾನಕ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಕಾಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೃತ್ಯ ನಡೆದಿದೆ.
10 ವರ್ಷದ ಬಾಲಕಿಗೆ ಚಾಕು ತೋರಿಸಿ 14 ಹಾಗೂ 16 ವರ್ಷದ ಇಬ್ಬರು ಅಪ್ರಾಪ್ತರೇ ಅತ್ಯಾಚಾರ ಎಸಗಿದ್ದಾರೆ. ಮಾತ್ರವಲ್ಲದೇ ಪರಸ್ಪರ ಮೊಬೈಲ್ನಲ್ಲಿ ವೀಡಿಯೋ ಮಾಡಿದ್ದಾರೆ. ಸಂತ್ರಸ್ತ ಬಾಲಕಿಯ ಹೆತ್ತವರು ಮುಂಬೈನಲ್ಲಿದ್ದು, ಆಕೆ ಸಂಬಂಧಿಕರ ಮನೆಯಲ್ಲಿದ್ದುಕೊಂಡು ಶಿಕ್ಷಣ ಪಡೆಯುತ್ತಿದ್ದಳು.