Categories: ಕಲಬುರಗಿ

ಕೈ ಸರ್ಕಾರಕ್ಕೆ 100 ದಿನಗಳಾದ್ರೂ 100 ಮೀಟರ್‌ ರಸ್ತೆ ನಿರ್ಮಿಸಲು ಸಾಧ್ಯವಾಗಿಲ್ಲ: ಕೋಟ

ಕಲಬುರಗಿ: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು 100 ದಿನಗಳಾದರೂ ಕೇವಲ 100 ಮೀಟರ್‌ ರಸ್ತೆ ಮಾಡಲು ಸಾಧ್ಯವಾಗಿಲ್ಲ ಎಂದು ಬಿಜೆಪಿ ಮಾಜಿ ಸಚಿವ ಕೋಟ ಶ್ರೀನಿವಾಸ್‌ ಪೂಜಾರಿ ವ್ಯಂಗ್ಯವಾಡಿದ್ದಾರೆ.

ಸೋಮವಾರ ಕಲಬುರಗಿಯಲ್ಲಿ ಮಾತನಾಡಿದ ಅವರು, ಶಕ್ತಿ ಯೋಜನೆಗಳಿಗೆ ಖಜಾನೆಯಿಂದ ಒಂದು ರೂಪಾಯಿ ಹಣ ನೀಡಿಲ್ಲ. ಬದಲಾಗಿ ‌ಎಸ್ಸಿ ಎಸ್ಟಿ ಜನರಿಗೆ ಮೀಸಲಾಗಿದ್ದ ಹಣವನ್ನು ಶಕ್ತಿ ಯೋಜನೆಗೆ ಬಳಸಲಾಗಿದೆ. ರಾಜ್ಯದಲ್ಲಿ ಶಾಸಕರು ನೂರು ದಿನದಲ್ಲಿ ನೂರು ಮೀಟರ್‌ ರಸ್ತೆ ಮಾಡಲು ಆಗಿಲ್ಲ. ವಿಧಾನಸೌಧಕ್ಕೆ ಮಂತ್ರಿಗಳು ಬರ್ತಿಲ್ಲ, ಸರ್ಕಾರದ ‌ಒಂದೇ ಒಂದು ಸಾಧನೆ ಅಂದ್ರೆ ‌ಅದು ವರ್ಗಾವಣೆ ದಂಧೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ತೀವ್ರ ಬರವಿದೆ ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬರ ಬರೋದಕ್ಕೂ ಕೇಂದ್ರ ಸರ್ಕಾರ ಕಾರಣ ಅನ್ನೋ ಮನಸ್ಥಿತಿಯಲ್ಲಿದ್ದಾರೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಕಿಡಿಕಾರಿದ್ದಾರೆ.

Gayathri SG

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

6 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

6 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

7 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

7 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

7 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

7 hours ago