ಕಲಬುರಗಿ: ಶ್ರೀ ಶರಣ ಬಸವೇಶ್ವರ ಜಾತ್ರಾ ಮಹೋತ್ಸವದ ಭಾಗವಾಗಿ ನಡೆದ ಉಚ್ಚಾಯಿ ರಥೋತ್ಸವದಲ್ಲಿ ತೇರಿನ ಚಕ್ರಕ್ಕೆ ಸಿಲುಕಿ ಹೋಂಗಾರ್ಡ್ ಸಿಬ್ಬಂದಿ ದುರ್ಮರಣ ಹೊಂದಿದ್ದು, ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿವೆ.
ಮೃತರನ್ನು ಬೀದರ್ ಜಿಲ್ಲೆ ಇಟಗಾ ಗ್ರಾಮದ ರಾಮು ಸಿದ್ದಪ್ಪ (28)ಎಂದು ಗುರುತಿಸಲಾಗಿದೆ. ಅಶೋಕರೆಡ್ಡಿ ಗಾಯಾಳು.
ತೇರು ಎಳೆಯುವ ವೇಳೆ ಉಂಟಾದ ಗದ್ದಲ ಹಾಗೂ ಭಕ್ತರನ್ನು ನಿಯಂತ್ರಿಸುವ ವೇಳೆ ಸಿಬ್ಬಂದಿ ಚಕ್ರಕ್ಕೆ ಸಿಲುಕಿ ಸಾವಿಗೀಡಾಗಿದ್ದಾರೆ. ಗಾಯಾಳು ಸಿಬ್ಬಂದಿಯನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಉಂಟಾದ ಗದ್ದಲದ ವೇಳೆ ದುರಂತ ಸಂಭವಿಸಿದೆ. ಆರ್.ಜೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.