Categories: ಕಲಬುರಗಿ

ಕಲಬುರಗಿ: ಮಾ .3 ಕ್ಕೆ ಬಸವಕಲ್ಯಾಣಕ್ಕೆ ಅಮಿತ್ ಶಾ, ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ

ಕಲಬುರಗಿ: ವಿಧಾನಸಭಾ ಚುನಾವಣೆಯ ಮತಗಳಿಕೆಗೆ ಬಿಜೆಪಿ ತಾಲೀಮು ತೀವ್ರಗೊಳಿಸಿದ್ದು, ಮಾರ್ಚ್‌ 3ರಂದು ಬೀದರ್‌ ಜಿಲ್ಲೆಯ ಬಸವಕಲ್ಯಾಣದಿಂದ ಹೊರಡುವ ಕಲಬುರಗಿ ವಿಭಾಗದ ‘ವಿಜಯ ಸಂಕಲ್ಪ ರಥಯಾತ್ರೆ’ಗೆ ಬಿಜೆಪಿ ಹಿರಿಯ ಮುಖಂಡ ಹಾಗೂ ಗೃಹ ಸಚಿವ ಅಮಿತ್ ಶಾ ಚಾಲನೆ ನೀಡುವರು.

ಮೈಸೂರು ವಿಭಾಗದ ಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ (ಮಾ.1) ಹಾಗೂ ಬೆಳಗಾವಿ ವಿಭಾಗದ ಯಾತ್ರೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ (ಮಾ.2) ಚಾಲನೆ ನೀಡುವರು. ಮಾ.3ರ ಬೆಳಿಗ್ಗೆ 11ಕ್ಕೆ ಬಸವಕಲ್ಯಾಣ ಹಾಗೂ ಸಂಜೆ ಬೆಂಗಳೂರಿನಲ್ಲಿ ಜರುಗುವ ರಥ ಯಾತ್ರೆಗೆ ಅಮಿತ್ ಶಾ ಹಸಿರು ನಿಶಾನೆ ತೋರುವರು ಎಂದು ಬಿಜೆಪಿ ಮುಖಂಡರೊಬ್ಬರು ತಿಳಿಸಿದ್ದಾರೆ.

ಅಮಿತ್ ಶಾ ಭೇಟಿ ಪ್ರಯುಕ್ತ ಭಾನುವಾರ ಪಕ್ಷದ ಕಚೇರಿಯಲ್ಲಿ ಕಲಬುರಗಿ ಮತ್ತು ಬೀದರ್ ಜಿಲ್ಲೆಗಳ ಬಿಜೆಪಿ ಮುಖಂಡರು ಸಭೆ ನಡೆಸಿ, ವಿಜಯ ಸಂಕಲ್ಪ ರಥಯಾತ್ರೆಯ ಯಶಸ್ಸು ಹಾಗೂ ಸಾಗುವ ಮಾರ್ಗದ ಕುರಿತು ಚರ್ಚಿಸಿದರು.

‘ಬಸವಕಲ್ಯಾಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಸೇರಿ ರಾಜ್ಯ ಸಚಿವರು, ಪಕ್ಷದ ವರಿಷ್ಠರು, ಸ್ಥಳೀಯ ಮುಖಂಡರು ಪಾಲ್ಗೊಳ್ಳುವರು. ಬಸವಕಲ್ಯಾಣ ವಿಧಾನಸಭೆಗೆ ಸೀಮಿತವಾಗಿದ್ದರಿಂದ ಕಾರ್ಯಕ್ರಮದಲ್ಲಿ ಸುಮಾರು 25 ಸಾವಿರ ಜನರು ಸೇರುವ ನಿರೀಕ್ಷೆ ಇದೆ’ ಎಂದು ಮೂಲಗಳು ತಿಳಿಸಿವೆ.

‘ನಾಲ್ಕೂ ವಿಭಾಗಗಳಿಂದ ಹೊರಡುವ ರಥಗಳು ಮಾರ್ಚ್‌ ಕೊನೆಯ ವಾರದಲ್ಲಿ ದಾವಣಗೆರೆಯಲ್ಲಿ ಸಮಾವೇಶಗೊಳ್ಳಲಿವೆ. ಮಾ.25-27ರ ನಡುವಿನ ಅವಧಿಯಲ್ಲಿ ನಡೆಯುವ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗುವುದು’ ಎಂದು ಅವರು ತಿಳಿಸಿದರು.

ಮಾ.5ರಂದು ಕಲಬುರಗಿ ಪ್ರವೇಶ: ‘ಮಾ.3ರಂದು ಬಸವಕಲ್ಯಾಣದಿಂದ ಹೊರ ‘ವಿಜಯ ಸಂಕಲ್ಪ’ ರಥವು ಭಾಲ್ಕಿ, ಔರಾದ್, ಬೀದರ್, ಬೀದರ್ ದಕ್ಷಿಣ ಮತ್ತು ಹುಮನಾಬಾದ್ ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಿ ಮಾ.5ರಂದು ಚಿಂಚೋಳಿ ಮೂಲಕ ಕಲಬುರಗಿ ಜಿಲ್ಲೆ ಪ್ರವೇಶಿಸಲಿದೆ. ಜಿಲ್ಲೆಯಲ್ಲಿ 2 ದಿನಗಳ ಕಾಲ 9 ವಿಧಾನಸಭಾ ಕ್ಷೇತ್ರಗಳನ್ನು ಹಾದು ಯಾದಗಿರಿಗೆ ತೆರಳಲಿದೆ. ರಥ ಸಾಗುವ ಮಾರ್ಗದ ರೂಟ್ ಮ್ಯಾಪ್‌ ಸಿದ್ಧಪಡಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ’ ಬಿಜೆಪಿ ಮುಖಂಡರು ತಿಳಿಸಿದರು.

‘ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ರಥ ಪ್ರವೇಶವು ಅದ್ದೂರಿಯಾಗಿ ನಡೆಯಲಿದೆ. ಕೆಲವೊಂದು ವಿಧಾನಸಭಾ ಕ್ಷೇತ್ರಗಳಲ್ಲಿ 2-4 ಕಿ.ಮೀ.ವರೆಗೆ ರೋಡ್ ಶೋ, ಮೂರು-ನಾಲ್ಕು ವಿಧಾನಸಭಾ ಕ್ಷೇತ್ರಗಳು ಒಳಗೊಂಡಂತೆ ಬಹಿರಂಗ ಸಭೆಗಳು ನಡೆಸಲಾಗುವುದು. 5ರಿಂದ 10 ಸಾವಿರ ಜನರು ಸೇರಿಸುವ ಗುರಿ ಹಾಕಿಕೊಂಡಿದ್ದೇವೆ’ ಎಂದು ತಿಳಿಸಿದರು.

ಪಕ್ಷದ ಸಭೆಯಲ್ಲಿ ಬಿಜೆಪಿ ರಾಜ್ಯ ವಕ್ತಾರ, ಕೆಕೆಆರ್‌ಟಿಸಿ ಅಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ, ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಶಾಸಕರಾದ ಬಸವರಾಜ ಮತ್ತಿಮಡು, ಡಾ.ಅವಿನಾಶ ಜಾಧವ, ರಘುನಾಥ ಮಲ್ಕಾಪುರೆ, ಶಶೀಲ್ ಜಿ.ನಮೋಶಿ, ತಳವಾರ ಸಾಬಣ್ಣ, ಕಲಬುರಗಿ ನಗರ ಘಟಕದ ಅಧ್ಯಕ್ಷ ಸಿದ್ದಾಜಿ ಪಾಟೀಲ, ಬೀದರ್ ಜಿಲ್ಲಾ ಘಟಕದ ಅಧ್ಯಕ್ಷ ಶೈಲೇಂದ್ರ ಬೆಲ್ದಾಳೆ, ಮುಖಂಡರಾದ ಅರುಣ ಬಿನ್ನಾಡಿ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಬಾಬುರಾವ ಆರ್.ಪಾಟೀಲ, ಲಿಂಗಾರೆಡ್ಡಿ ಬಾಸರೆಡ್ಡಿ ಸೇರಿದಂತೆ ಸ್ಥಳೀಯರ ಮುಖಂಡರು ಇದ್ದರು.

Ashika S

Recent Posts

ಕಡಬ: ಸಿಡಿಲು ಬಡಿದು ಮರಳುಗಾರಿಕೆ ಮಾಡುತ್ತಿದ್ದ ಕಾರ್ಮಿಕ ಸಾವು

ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಗೆ ವರುಣ ತಂಪೇರಗಿದ್ದಾನೆ. ಈ ನಡುವೆ ಸಿಡಿಲು…

3 mins ago

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥ

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ

4 mins ago

ಮಂಜೂರಾದ ಜಮೀನು ಪಿಟಿಸಿಎಲ್ ಕಾಯಿದೆಯಡಿ ಮರು ಸ್ಥಾಪನೆ ಇಲ್ಲ

ಕರ್ನಾಟಕ ಭೂ ಸುಧಾರಣಾ ಕಾಯಿದೆಯಡಿಯಲ್ಲಿ ಭೂ ನ್ಯಾಯಮಂಡಳಿಗಳಿಂದ ಮಂಜೂರಾಗಿರುವ ಜಮೀನುಗಳನ್ನು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಕೆಲ ಜಮೀನುಗಳ…

16 mins ago

ಗೆಳಯನಿಗೆ ಸಾತ್‌ ನೀಡಲು ಹೋಗಿದ್ದ ಅಲ್ಲು ವಿರುದ್ಧ ಕೇಸ್ ದಾಖಲು

ಪುಷ್ಪಾ-2 ರಿಲೀಸ್​ ಕ್ರೇಜ್​ನಲ್ಲಿರೋ ಐಕಾನ್​ ಸ್ಟಾರ್ ಅಲ್ಲು ಅರ್ಜುನ್​ಗೆ ಆಂಧ್ರ ಪ್ರದೇಶ ಪೊಲೀಸರು ಬಿಗ್ ಶಾಕ್ ನೀಡಿದ್ದು, ಅಲ್ಲು ಅರ್ಜುನ್…

19 mins ago

ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆ : ನಾಲ್ಕನೇ ಆರೋಪಿ ಅರೆಸ್ಟ್‌

ಕೆನಡಾದಲ್ಲಿ ಕಳೆದ ವರ್ಷ ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರನಾಗಿದ್ದ, ಖಲಿಸ್ತಾನಿ ಪರ ಹೋರಾಟಗಾರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ನನ್ನು ಹತ್ಯೆ…

41 mins ago

ಆರು ತಿಂಗಳ ಬಳಿಕ ಭಕ್ತರಿಗೆ ದರ್ಶನ ನೀಡಿದ ಬದರಿನಾಥ

ಉತ್ತರಾಕಾಂಡ ಚಮೋಲಿಯಲ್ಲಿರುವ ಬದರಿನಾಥ ಬಾಗಿಲನ್ನು ಇಂದು(ಬಾನುವಾರ) ಬೆಳಿಗ್ಗೆ 6 ಗಂಟೆಗೆ ತೆರೆಯಲಾಯಿತು. ಈ ವೇಳೆ ವೇದ ಘೋಷಗಳು ಮತ್ತು ನೆರೆದಿದ್ದ…

57 mins ago