ಕಲಬುರಗಿ

ಕಲಬುರಗಿ: ಕೇಂದ್ರ ಸಚಿವರ ಸಮ್ಮುಖದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಬಿಜೆಪಿ ಅಭ್ಯರ್ಥಿ

ಕಲಬುರಗಿ: ಕೇಂದ್ರ ಸಚಿವರ ಸಮ್ಮುಖದಲ್ಲೇ ಬಿಜೆಪಿ ಅಭ್ಯರ್ಥಿಯು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗಂವ್ಹಾರ ಗ್ರಾಮದಲ್ಲಿ ನಡೆದಿದೆ.

ಚುನಾವಣಾ ಪ್ರಚಾರದ ವೇಳೆ, ಚಿಕ್ಕಮಗುವಿನ ಮೂಲಕ ಬಿಜೆಪಿ ಪರವಾಗಿ ಮತ ಪ್ರಚಾರ ಮಾಡಲಾಗಿದೆ. ಆದರೆ, ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸುವಂತಿಲ್ಲ ಎಂಬ ನಿಯಮವಿದೆ.

ಜೇವರ್ಗಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಜ್ ಪಾಟೀಲ್ ರದ್ದೆವಾಡಗಿ ಅವರು ಮಕ್ಕಳನ್ನು ತಮ್ಮ ಚುನಾವಣಾ ಪ್ರಚಾರಕ್ಕಾಗಿ ಬಳಸಿಕೊಂಡ ಆರೋಪವನ್ನು ಎದುರಿಸುತ್ತಿದ್ದಾರೆ. ಜೇವರ್ಗಿ ತಾಲೂಕಿನ ಗಂವ್ಹಾರ ಗ್ರಾಮದಲ್ಲಿ ಬಿಜೆಪಿ ಪ್ರಚಾರಸಭೆಯನ್ನು ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಅವರೂ ಭಾಗಿಯಾಗಿದ್ದರು.

ಗಂವ್ಹಾರ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿ ಶಿವರಾಜ್ ಪಾಟೀಲ್ ಪರವಾಗಿ ಚಿಕ್ಕ ಮಗುವಿನ ಮೂಲಕ ಮತ ಪ್ರಚಾರ ಮಾಡಲಾಗಿದೆ. ಆ ಮೂಲಕ ಬಿಜೆಪಿ ಅಭ್ಯರ್ಥಿ ಸ್ಪಷ್ಟವಾಗಿ ಎಂದು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ವೇದಿಕೆಯಲ್ಲಿ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಅವರೂ ಹಾಜರಿದ್ದರು. ಈ ವೇಳೆ ಭಾಷಣ ಮಾಡುವ ಚಿಕ್ಕ ಮಗು, ಬಿಜೆಪಿಗೆ ಮತ ಹಾಕುವಂತೆ ಮನವಿ ಮಾಡುತ್ತದೆ. ಆಗ ವೇದಿಕೆಯಲ್ಲಿದ್ದ ಕೇಂದ್ರ ಸಚಿವರೂ ಸೇರಿ ಎಲ್ಲರೂ ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸುತ್ತಾರೆ. ಮಗುವನ್ನು ಪ್ರಚಾರಕ್ಕೆ ಬಳಸಿಕೊಂಡಿದ್ದಕ್ಕೆ ಸಾರ್ವಜನಿಕರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚುನಾವಣಾ ನಿಯಮಗಳ ಪ್ರಕಾರ ಪ್ರಚಾರಕ್ಕಾಗಿ ಚಿಕ್ಕಮಕ್ಕಳನ್ನು ಪ್ರಚಾರಕ್ಕೆ ಬಳಸಿಕೊಳ್ಳುವಂತಿಲ್ಲ. ಒಂದೊಮ್ಮೆ ಬಳಸಿಕೊಂಡರೆ ಕಾನೂನು ಪ್ರಕಾರ ಅಪರಾಧ ಹಾಗೂ ನೀತಿ ಸಂಹಿತೆ ಉಲ್ಲಂಘನೆ ಎಂದು ಪರಿಗಣಿಸಲಾಗುತ್ತದೆ. ಈ ಘಟನೆಯ ಬಗ್ಗೆ ಚುನಾವಣಾ ಆಯೋವು ದೂರು ದಾಖಲಿಸಿಕೊಂಡ ಬಗ್ಗೆ ಯಾವುದೇ ಮಾಹಿತಿ ಇಲ್ಲ.

Ashika S

Recent Posts

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

3 mins ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

17 mins ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

1 hour ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

1 hour ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

1 hour ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

2 hours ago