News Karnataka Kannada
Monday, April 29 2024
ಕಲಬುರಗಿ

ಕಲಬುರಗಿ-ಮಂಗಳೂರು ವಿಮಾನ ಸೇವೆ ಆರಂಭಿಸಿ: ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ

Kalaburagi-Mangaluru flight service: Minister Shobha Karandlaje requested
Photo Credit : News Kannada

ಕಲಬುರಗಿ: ಮಂಗಳೂರು-ಕಲಬುರಗಿ ನಡುವೆ ವಿಮಾನ ಸೇವೆ ಆರಂಭಿಸಬೇಕು ಎಂದು ಒತ್ತಾಯಿಸಿ ಕಲಬುರಗಿಯ ದಕ್ಷಿಣ ಕನ್ನಡ ಸಂಘದ ಪದಾಧಿಕಾರಿಗಳು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ‘ಈ ಕುರಿತು ವಿಮಾನಯಾನ ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ಅವರ ಜತೆ ಚರ್ಚಿಸಲಾಗುವುದು’ ಎಂದು ತಿಳಿಸಿದರು.

ಇಲ್ಲಿಯ ವಿಮಾನ ನಿಲ್ದಾಣ ನೈಟ್ ಲ್ಯಾಂಡಿಂಗ್ ಸೌಲಭ್ಯ ಹೊಂದಿದೆ. ಮುಂದಿನ ದಿನಗಳಲ್ಲಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಖಾಸಗಿ ವಿಮಾನ ಸಂಸ್ಥೆಗಳ ಜತೆ ಚರ್ಚೆ ನಡೆಸುವಂತೆ ಸೂಚಿಸಲಾಗುವುದು. ಕಲಬುರಗಿಯಿಂದ ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ವಿಮಾನ ಸಂಚಾರ ಪ್ರಾರಂಭಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

ಈಗಾಗಲೇ ಮಂಗಳೂರು-ಹುಬ್ಬಳ್ಳಿ ನಡುವೆ ವಿಮಾನ ಸಂಚಾರ ಪ್ರಾರಂಭವಾಗಿದೆ. ಪ್ರಯಾಣಿಕರ ಕೊರತೆಯಿಂದ ಸ್ಥಗಿತಗೊಂಡಿದೆ. ಆದರೆ, ಕಲಬುರಗಿಯಿಂದ ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ವಿಮಾನ ಸಂಚಾರ ಪ್ರಾರಂಭಿಸಿದರೆ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಬಹುದು ಎಂದು ಹೇಳಿದರು.ಕರಾವಳಿಯ ಶಿಕ್ಷಣ ಸಂಸ್ಥೆ, ಧಾರ್ಮಿಕ ಕ್ಷೇತ್ರ ಹಾಗೂ ಪ್ರವಾಸಿ ಕೇಂದ್ರಗಳಿಗೆ ಈ ಭಾಗದಿಂದ ಹೆಚ್ಚಿನ ಜನರು ತೆರಳುತ್ತಿರುವುದರಿಂದ ವಿಮಾನ ಸಂಚಾರ ಲಾಭದಾಯಕವಾಗಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿಮಾನ ನಿಲ್ದಾಣದ ನಿರ್ದೇಶಕ ಮಹೇಶ್ ಚಿಲ್ಕಾ ಅವರ ಜೊತೆ ಸಚಿವೆ ಶೋಭಾ ಕರಂದ್ಲಾಜೆ ಚರ್ಚಿಸಿ ಸಾಧ್ಯತೆಗಳ ಬಗ್ಗೆ ತಿಳಿದುಕೊಂಡರು. ಕೂಡಲೇ ಸಂಬಂಧಿಸಿದ ಇಲಾಖೆಗೆ ಪ್ರಸ್ತಾಪ ಸಲ್ಲಿಸಬೇಕು. ಪ್ರಸ್ತಾಪದ ಪ್ರತಿಯನ್ನು ತಮಗೂ ನೀಡಬೇಕು ಎಂದು ಸೂಚಿಸಿದರು.

ವಿಧಾನ ಪರಿಷತ್ ಸದಸ್ಯರಾದ ಬಿ.ಜಿ ಪಾಟೀಲ, ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ದಕ್ಷಿಣ ಕನ್ನಡ ಸಂಘದ ಅಧ್ಯಕ್ಷ ಸದಾನಂದ ಪೆರ್ಲ, ಸದಸ್ಯರಾದ ಜೀವನಕುಮಾರ ಜತ್ತನ್, ಕಾರ್ಯದರ್ಶಿ ಪುರಂದರ ಭಟ್, ಕ್ರೀಡಾ ಕಾರ್ಯದರ್ಶಿ ಸುನಿಲ್ ಶೆಟ್ಟಿ ಹಾಗೂ ಮತ್ತಿತರರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು