ಕಲಬುರಗಿ: ಕಲಬುರಗಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. 15 ವರ್ಷದ ಬಾಲಕಿ ಬಹಿರ್ದೆಸೆಗೆಂದು ತೆರಳಿದ್ದ ವೇಳೆ ಆಕೆಯನ್ನು ಎಳೆದೊಯ್ದು ಅತ್ಯಾಚಾರವೆಸಗಿ, ಕೊಲೆ ಮಾಡಿದ್ದಾರೆ.
ಮೃತ ಬಾಲಕಿ ಮಂಗಳವಾರ ಮಧ್ಯಾಹ್ನ ಮೂರು ಗಂಟೆ ಸಮಯದಲ್ಲಿ ಶೌಚಾಲಯಕ್ಕೆ ಹೋಗಿದ್ದ ವೇಳೆಯಲ್ಲಿ ಈ ಘಟನೆ ನಡೆದಿದೆ. ಬಾಲಕಿಯನ್ನು ಕಬ್ಬಿನ ಗದ್ದೆಗೆ ಎಳೆದೊಯ್ದು ಅತ್ಯಾಚಾರವೆಸಗಿ ಕೊಲೆಗೈದಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಈ ಬಗ್ಗೆ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.