ಕಲಬುರಗಿ

ಕನ್ನಡ ಭಾಷೆಯಲ್ಲಿ ವ್ಯವಹರಿಸುವುದು ಕಡ್ಡಾಯ ಮಾಡಿ

ಕಲಬುರಗಿ: ರಾಜ್ಯದ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು ಹಾಗೂ ಅಂಗಡಿಗಳಲ್ಲಿ ಕಡ್ಡಾಯವಾಗಿ ಕನ್ನಡದಲ್ಲಿ ವ್ಯವಹರಿಸಬೇಕು. ಕನ್ನಡ ನಾಮಫಲಕಗಳನ್ನು ಇರಿಸಬೇಕು ಎಂದು ಆದೇಶ ಹೊರಡಿಸಬೇಕು ಎನ್ನುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವೀರ ಕನ್ನಡಿಗರ ಸೇನೆ ಪದಾಧಿಕಾರಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ‍್ರತಿಭಟನೆ ನಡೆಸಿದರು.

ಸೇನೆ ರಾಜ್ಯಾಧ್ಯಕ್ಷ ಅಮೃತ ಪಾಟೀಲ ಸಿರನೂರ ಮಾತನಾಡಿ, ‘ಕೆಲ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳಲ್ಲಿ ಕನ್ನಡದಲ್ಲಿ ವ್ಯವಹರಿಸುವುದಿಲ್ಲ. ಇದು ಸರಿಯಾದ ಕ್ರಮವಲ್ಲ. ಇದರಿಂದ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಸರ್ಕಾರ ಕನ್ನಡದಲ್ಲಿ ವ್ಯವಹರಿಸಬೇಕು ಎಂದು ಕೂಡಲೇ ಆದೇಶ ಹೊರಡಿಸಬೇಕು’ ಎಂದರು.

ಕಲ್ಯಾಣ ಕರ್ನಾಟಕದ ಕೇಂದ್ರ ಕಲಬುರಗಿಯಲ್ಲಿ ಅಂತರರಾಷ್ಟ್ರೀಯ ಕ್ರೀಡಾಂಗಣ ನಿರ್ಮಿಸಬೇಕು. ಜಿಲ್ಲೆಯಾದ್ಯಂತ ರೈತರು ಸಂಕಷ್ಟಕ್ಕೆ ಸಿಲುಕಿದ್ದು ಪ್ರತಿ ಎಕರೆಗೆ ₹20,000 ಪರಿಹಾರ ನೀಡಬೇಕು. ಸರೋಜಿನಿ ಮಹಿಷಿ ವರದಿ ಜಾರಿ ಮಾಡಬೇಕು. ರಾಜ್ಯದಲ್ಲಿರುವ ಕಂಪನಿಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದು ಸರ್ಕಾರ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದರು.

ಸಮಿತಿಯ ರಾಜ್ಯ ಉಪಾಧ್ಯಕ್ಷ ರವಿ ಒಂಟಿ, ಶಿವಾಜಿ ಚವಾಣ್, ಸಿದ್ದು ಕಂದಗಲ್, ರಜನಿಕಾಂತ ಭೋವಿ, ಶಿವಾನಂದ ಚಿಕ್ಕಾಣಿ, ಹಣಮಂತ ಇಂಜಳ್ಳಿ, ವಿಠ್ಠಲಪ್ರಕಾಶ ಪಾಟೀಲ ಸೇರಿ ಹಲವರು ಪಾಲ್ಗೊಂಡಿದ್ದರು.

Ashika S

Recent Posts

ಇಂಡಿಯಾ ಮೈತ್ರಿಕೂಟಕ್ಕೆ ಬಾಹ್ಯ ಬೆಂಬಲ ನೀಡುವುದಾಗಿ ಮಮತಾ ಬ್ಯಾನರ್ಜಿ ಘೋಷಣೆ

ಸಾರ್ವತ್ರಿಕ ಚುನಾವಣೆಯ ನಂತರ ವಿರೋಧ ಪಕ್ಷ ಅಧಿಕಾರಕ್ಕೆ ಬಂದರೆ ತಾವು ಬಾಹ್ಯ ಬೆಂಬಲ ನೀಡುವುದಾಗಿ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ…

14 mins ago

ಪ್ರಜ್ವಲ್ ರೇವಣ್ಣನನ್ನು ಬಂಧಿಸುವಂತೆ ಮಹಿಳಾ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಕೇಂದ್ರ ಸರಕಾರ ಮತ್ತು ಪ್ರಧಾನಮಂತ್ರಿ ಪ್ರಜ್ವಲನನ್ನು ಕರೆತರುವಲ್ಲಿ ಆಸಕ್ತಿ ಹೊಂದಿಲ್ಲವೆಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಕೇಂದ್ರ ಸರ್ಕಾರ ಮೇಲೆ ತೀವ್ರ…

16 mins ago

ಆರ್​​ಸಿಬಿ ತಂಡದ ಸತತ 5 ಪಂದ್ಯಗಳ ಗೆಲುವಿಗೆ ಕಾರಣ ಯಾರು ಗೊತ್ತಾ?

ಬಹುನಿರೀಕ್ಷಿತ 2024ರ ಇಂಡಿಯನ್​ ಪ್ರೀಮಿಯರ್​ ಲೀಗ್​​ 17ನೇ ಸೀಸನ್​​ ಮುಕ್ತಾಯ ಹಂತಕ್ಕೆ ಬಂದಿದೆ. ಸತತ 6 ಪಂದ್ಯ ಗೆದ್ದು ಪ್ಲೇ…

20 mins ago

ಸಚಿನ್ ತೆಂಡೂಲ್ಕರ್ ಭದ್ರತಾ ಸಿಬ್ಬಂದಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಕ್ರಿಕೆಟ್ ದಿಗ್ಗಜ ಮತ್ತು ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಸಚಿನ್ ತೆಂಡೂಲ್ಕರ್ ಅವರ ವೈಯಕ್ತಿಕ ಭದ್ರತಾ ಸಿಬ್ಬಂದಿ(ಗನ್​ಮ್ಯಾನ್​) ಸರ್ವೀಸ್ ಗನ್…

31 mins ago

ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ಕೃಷಿ ಉಪಕರಣಗಳು, ಬಿತ್ತನೆ ಬೀಜ ವಿತರಣೆ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲೂಕಿನ ಬಿಳಿಗೆರೆ ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ಕೃಷಿಭಾಗ್ಯ ಯೋಜನೆಯ ಅಡಿಯಲ್ಲಿ ರೈತರಿಗೆ ಕೃಷಿ…

35 mins ago

ಬೆಂಬಲಿಗರ ಸಭೆ ನಡೆಸಿದ ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್

ನೈರುತ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿಯಲ್ಲಿ ಬಂಡಾಯವಾಗಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಶಾಸಕ ರಘುಪತಿ ಭಟ್ ಇಂದು ತಮ್ಮ ನಿವಾಸದಲ್ಲಿ…

49 mins ago