News Karnataka Kannada
Thursday, May 09 2024
ಕಲಬುರಗಿ

ಬೇಸಿಗೆ ರಜೆಯಲ್ಲೂ ಸರಕಾರಿ ಶಾಲಾ ಮಕ್ಕಳಿಗೆ ಬಿಸಿಯೂಟ

ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಬೇಸಿಗೆ ರಜೆಯಲ್ಲಿಯೂ ಮಧ್ಯಾಹ್ನದ ಬಿಸಿಯೂಟ ಮುಂದುವರೆಸಲು ಚಿಂತನೆ ನಡೆದಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
Photo Credit : News Kannada

ಕಲಬುರಗಿ: ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಬೇಸಿಗೆ ರಜೆಯಲ್ಲಿಯೂ ಮಧ್ಯಾಹ್ನದ ಬಿಸಿಯೂಟ ಮುಂದುವರೆಸಲು ಚಿಂತನೆ ನಡೆದಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿ ಬೇಸಿಗೆ ರಜೆಯಲ್ಲಿಯೂ ಮಧ್ಯಾಹ್ನ ಬಿಸಿಯೂಟ ಮುಂದುವರೆಸಲು ಅನುಮೋದನೆ ಪಡೆದ ಬಳಿಕ ಆದೇಶ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.

ಈ ಹಿಂದೆ 8ನೇ ತರಗತಿವರೆಗೆ ಶಾಲಾ ಮಕ್ಕಳಿಗೆ ವಾರದಲ್ಲಿ ಒಮ್ಮೆ ಮೊಟ್ಟೆ ನೀಡಲಾಗುತ್ತಿತ್ತು, ನಮ್ಮ ಸರ್ಕಾರ ಬಂದ ನಂತರ ವಾರದಲ್ಲಿ 2 ಬಾರಿ ಮೊಟ್ಟೆ ನೀಡಲಾಗುತ್ತಿದ್ದು, ಇದನ್ನು 10ನೇ ತರಗತಿವರೆಗೆ ವಿಸ್ತರಿಸಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಪೌಷ್ಠಿಕ ಆಹಾರ ನೀಡುವತ್ತ ಸಹ ಇಲಾಖೆ ಗಮನಹರಿಸುತ್ತಿದೆ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು