Categories: ಕಲಬುರಗಿ

ಕಲಬುರಗಿ ಜಿಲ್ಲೆಯಲ್ಲಿ ಲಘು ಭೂಕಂಪನ

ಕಲಬುರಗಿ: ಉತ್ತರ ಕರ್ನಾಟಕದ ಕಲಬುರಗಿ ಜಿಲ್ಲೆಯಲ್ಲಿ ಬುಧವಾರ ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆಯ ಭೂಕಂಪ ಸಂಭವಿಸಿದೆ.

ಬೆಳಿಗ್ಗೆ 9.48 ಕ್ಕೆ ಸುಮಾರು ಐದು ಸೆಕೆಂಡುಗಳ ಕಾಲ ಸಂಭವಿಸಿದ ಭೂಕಂಪನವು ಬೆನಕನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜನರಲ್ಲಿ ಭೀತಿಯನ್ನು ಸೃಷ್ಟಿಸಿತು.

ಭೂಕಂಪವನ್ನು ದೃಢಪಡಿಸಿರುವ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ಟ್ವೀಟ್ ಮಾಡಿದೆ.

ಹೆಚ್ಚಿನ ಮಾಹಿತಿಗಳನ್ನು ಸಂಗ್ರಹಿಸಲು ಜಿಲ್ಲಾ ಅಧಿಕಾರಿಗಳು ಭೂಕಂಪ ಸಂಭವಿಸಿದ ಸ್ಥಳಗಳಿಗೆ ತಂಡಗಳನ್ನು ಕಳುಹಿಸಿದ್ದಾರೆ. ಜನರು ಭಯಭೀತರಾಗದಂತೆ ಅವರು ವಿನಂತಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಕಲಬುರಗಿ ಜಿಲ್ಲೆಗೆ ಭೇಟಿ ನೀಡಲಿದ್ದು, ಈ ಬೆಳವಣಿಗೆಯ ಬಗ್ಗೆ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

Ashika S

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

13 mins ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

37 mins ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

52 mins ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

2 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

3 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

3 hours ago