News Karnataka Kannada
Friday, May 10 2024
ಕಲಬುರಗಿ

ಪೊಲೀಸ್ ಕಾನ್‌ಸ್ಟೆಬಲ್ ಪರೀಕ್ಷೆ ಮುಂದೂಡಿಕೆ

Police constable exam postponed
Photo Credit : News Kannada

ಕಲಬುರಗಿ: ನವೆಂಬರ್ 5ಕ್ಕೆ ನಡೆಯಬೇಕಿದ್ದ ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆ ಮುಂದೂಡಿಕೆ ಆಗಿದ್ದು, ನ.19ಕ್ಕೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ರಾಜ್ಯ ಲೋಕಸೇವಾ ಆಯೋಗವು ಲೆಕ್ಕ ಪರಿಶೋಧನಾ ಮತ್ತು ಲೆಕ್ಕ ಸಹಾಯಕರ ಹಾಗೂ ರಾಜ್ಯ ಪೊಲೀಸ್‌ ಇಲಾಖೆಯ ಖಾಲಿ ಇರುವ ಹುದ್ದೆಗಳಿಗೆ ಒಂದೇ ದಿನ (ನ.5) ಲಿಖಿತ ಪರೀಕ್ಷೆ ನಿಗದಿ ಪಡಿಸಿತ್ತು. ಇದರಿಂದ ಸಾವಿರಾರು ಅರ್ಹ ಅಭ್ಯರ್ಥಿಗಳಿಗೆ ಅದರಲ್ಲೂ ಕಲ್ಯಾಣ ಕರ್ನಾಟಕ ಭಾಗದ ಯುವಕರಿಗೆ ಹೆಚ್ಚಿನ ಅನನುಕೂಲವಾಗುತ್ತಿತ್ತು. ಪರೀಕ್ಷೆಯ ದಿನಾಂಕ ಬದಲಾಯಿಸುವಂತೆ ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದ್ದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ನೇಮಕಾತಿ ಸಮನ್ವಯ ಅಧಿಕಾರಿ ಯಡಾ ಮಾರ್ಟನ್ ಹಾಗೂ ಡಿಜಿಪಿ ಕಮಲ್ ಪಂತ್ ಅವರೊಂದಿಗೆ ಗುರುವಾರ ಸಭೆ ನಡೆಸಿ ಪರಿಸ್ಥಿತಿಯ ಬಗ್ಗೆ ವಿವರಿಸಿದ್ದೆ. ಹೀಗಾಗಿ, ಕಾನ್‌ಸ್ಟೆಬಲ್ ಪರೀಕ್ಷೆಯ ದಿನಾಂಕ ಮುಂದೂಡಿ ಆದೇಶ ಹೊರಡಿಸಿದೆ ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು