News Karnataka Kannada
Sunday, April 28 2024
ಕಲಬುರಗಿ

ತಂಗಿಗೆ ನಕಲು ಮಾಡಲು ಬಿಡಲಿಲ್ಲ ಎಂದು ಪೇದೆ ಮೇಲೆ ಅಣ್ಣನಿಂದ ಹಲ್ಲೆ

ರಾಜ್ಯಾದ್ಯಂತ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಇಲ್ಲೊಬ್ಬ ತಂಗಿಗೆ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡಿಲ್ಲ ಎಂದು ಕೋಪದಲ್ಲಿ ಪೇದೆ ಮೇಲೆ ಅಣ್ಣ ಹಲ್ಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ್ ತಾಲೂಕಿನ ಕರಜಗಿ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ.
Photo Credit : NewsKarnataka

ಕಲಬುರಗಿ: ರಾಜ್ಯಾದ್ಯಂತ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಇಲ್ಲೊಬ್ಬ ತಂಗಿಗೆ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ  ಮಾಡಿಲ್ಲ ಎಂದು ಕೋಪದಲ್ಲಿ  ಪೇದೆ ಮೇಲೆ ಅಣ್ಣ  ಹಲ್ಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ್ ತಾಲೂಕಿನ ಕರಜಗಿ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ.

ಪಿಯುಸಿ ಪರೀಕ್ಷೆ ನಡೆಯುತ್ತಿದ್ದ ಸಮಯದಲ್ಲಿ ಕೈಲಾಸ್ ಎಂಬಾತ ಪೊಲೀಸ್ ಪೇದೆ ಪಂಡಿತ್ ಪಾಂಡ್ರೆ ನಡುವೆ ಮಾತಿನ ಚಕಮಕಿ ನಡೆದಿದ್ದು, ಮಾತಿಗೆ ಮಾತು ಬೆಳೆದು ನನ್ನ ತಂಗಿಗೆ ನಕಲು ಮಾಡಲು ಬಿಡಲ್ವಾ ಎಂದು ರೊಚ್ಚಿಗೆದ್ದ ಕೈಲಾಸ್, ಪಂಡಿತ್ ಪಾಂಡ್ರೆ ಮೇಲೆ ಹಲ್ಲೆ ನಡೆಸಿದ್ದಾನೆ. ಪ್ರಕರಣಕ್ಕೆ  ಸಂಬಂಧಿಸಿದಂತೆ ಆರೋಪಿ ಕೈಲಾಸ್ ಹಾಗೂ ಆತನ ಸ್ನೇಹಿತ ಸಮೀರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಅಫಜಲಪುರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು