News Karnataka Kannada
Wednesday, May 01 2024
ಕಲಬುರಗಿ

ಚಲನಚಿತ್ರಗಳಲ್ಲಿ ಮಕ್ಕಳ ನಟನೆಗೆ ಪೂರ್ವಾನುಮತಿ ಕಡ್ಡಾಯ : ಕಲಬುರಗಿ ಡಿಸಿ ಎಚ್ಚರಿಕೆ

ಸಿನಿಮಾ ಇಲ್ಲವೇ ಧಾರವಾಹಿಗಳಲ್ಲಿ ಮಕ್ಕಳು ನಟಿಸಬೇಕಾದರೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
Photo Credit : NewsKarnataka

ಕಲಬುರಗಿ: ಸಿನಿಮಾ ಇಲ್ಲವೇ ಧಾರವಾಹಿಗಳಲ್ಲಿ ಮಕ್ಕಳು ನಟಿಸಬೇಕಾದರೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬಾಲ ನಟರು, ನಟಿಯರ ಪಾತ್ರಕ್ಕಾಗಿ ಮಕ್ಕಳನ್ನು ಬಳಸಿಕೊಳ್ಳಲು ಇಚ್ಛಿಸುವ ಸಿನಿಮಾ ನಿರ್ದೇಶಕರು, ಇಲ್ಲವೇ ನಿರ್ಮಾಪಕರು, ಆಯೋಜಕರು ಮೊದಲು ಜಿಲ್ಲಾಧಿಕಾರಿ ಅವರಿಂದ ಕಡ್ಡಾಯವಾಗಿ ಅನುಮತಿ ಪತ್ರ ಪಡೆಯಬೇಕು ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.

ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ರಾಜ್ಯ ಕಾರ್ಮಿಕ ಇಲಾಖೆಯು ಈ ಆದೇಶ ಹೊರಡಿಸಿದೆ. ಸಿನಿಮಾ, ಧಾರವಾಹಿಗಳಲ್ಲಿ ಅಭಿನಯಿಸಬೇಕಾದರೆ ಮೊದಲು ಅವರು ಜಿಲ್ಲಾಧಿಕಾರಿಗಳಿಂದ ಕಡ್ಡಾಯವಾಗಿ ಅನುಮತಿ ಪಡೆದಿರಬೇಕು.

ಧಾರವಾಹಿ ಇಲ್ಲವೇ ಸಿನಿಮಾಗಳಲ್ಲಿ ಮಕ್ಕಳಿಗೆ ಪಾತ್ರ ನೀಡುವ ಸಿನಿಮಾ- ಸೀರಿಯಲ್ ತಂಡಗಳು ಅವರನ್ನು ದಿನದಲ್ಲಿ ಐದು ಗಂಟೆ ಮಾತ್ರವೇ ನಟನೆಗೆ ಬಳಸಿಕೊಳ್ಳಬೇಕು. ಈ ರೀತಿ ಅವರನ್ನು ತಿಂಗಳಲ್ಲಿ 27 ದಿನ ಮಾತ್ರ ಬಳಸಿಕೊಳ್ಳಬೇಕು ಎಂದು ಸರ್ಕಾರ ಷರತ್ತು ವಿಧಿಸಿದೆ. ಜೊತೆಗೆ ಈ ನಿಯಮ ಉಲ್ಲಂಘಿಸಿದಂತೆ ಎಚ್ಚರಿಕೆಯನ್ನೂ ನೀಡಿದೆ.

ಮುಂದಿನ ದಿನಗಳಲ್ಲಿ ಮಕ್ಕಳನ್ನು ಚಿತ್ರಕಥೆಗೆ ಅನುಗುಣವಾಗಿ ಜಿಲ್ಲಾಧಿಕಾರಿ ಅನುಮತಿ ಇಲ್ಲದೇ ಬಳಸಿಕೊಳ್ಳವುದು ಕಾನೂನು ಉಲ್ಲಂಘನೆಯಾಗಲಿದ್ದು, ಕಾನೂನು ಉಲ್ಲಂಘಿಸುವ ಸಿನಿಮಾ ಹಾಗೂ ಧಾರವಾಹಿ ಜವಾಬ್ದಾರಿ ಹೊತ್ತ ಆಯೋಜಕರು, ನಿರ್ಮಾಪಕರ ವಿರುದ್ಧ ಕಾನೂನಿನನ್ವಯ ಕ್ರಮ ಕೈಗೊಳ್ಳಲಾಗುವುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು