ಕಲಬುರಗಿ

ಕೆರೆಗಳ ಪುನರುಜ್ಜೀವನಕ್ಕೆ ಸೂಕ್ತ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ನಗರದ ಅಪ್ಪನ ಕೆರೆ ಸೇರಿದಂತೆ ಜಿಲ್ಲೆಯ ಕೆರೆಗಳ ಪುನರುಜ್ಜೀವನ ಮಾಡುವ ಕೆಲಸವನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ನಗರದಲ್ಲಿ ಗುರುವಾರ ನವೀಕರಣಗೊಂಡ ಅಪ್ಪನ‌ಕೆರೆ ಉದ್ಯಾನವನ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಕೋವಿಡ್ ಸಂಧರ್ಭದಲ್ಲಿ ಬಂದ್ ಮಾಡಲಾಗಿದ್ದ ಅಪ್ಪನ ಕೆರೆಯನ್ನು ಪ್ರಾದೇಶಿಕ ಆಯುಕ್ತರ ವಿಶೇಷ ಆಸಕ್ತಿಯಿಂದಾಗಿ ಈಗ ಉದ್ಯಾನವನ್ನು ನವೀಕರಣಗೊಳಿಸಲಾಗಿದೆ. ಇದು ಸಾರ್ವಜನಿಕರ ಆಸ್ತಿ ಇದನ್ನು ಜವಾಬ್ದಾರಿಯುತವಾಗಿ ಉಳಿಸಿ ಬೆಳೆಸಿ ಮುಂದಿನ ಪೀಳಿಗೆಗಾಗಿ ರಕ್ಷಿಸಬೇಕು ಎಂದು ಸಾರ್ವಜನಿಕರಲ್ಲಿ‌ ಮನವಿ ಮಾಡಿದರು.

ಕಲಬುರಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಇನ್ಮೂ ಹೆಚ್ಚು ಹಾಲು ಉತ್ಪಾದನೆಗೆ ಪ್ರೋತ್ಸಾಹ ನೀಡಲು ತಾವು ಅಗತ್ಯ ಸಹಕಾರ ನೀಡಲು ಸಿದ್ದವಿರುವುದಾಗಿ ಸಚಿವರು ಹೇಳಿದರು.

ಈ ಸಂದರ್ಭದಲ್ಲಿ ಸಚಿವರು ಎಮ್ಮೆ ಹಾಲಿನ ನೂತನ ಪ್ಯಾಕೆಟ್ ಬಿಡುಗಡೆ ಮಾಡಿದರು. ಜೊತೆಗೆ ಅಪ್ಪನ ಕರೆಯ ಕುರಿತಾದ ವಿಡಿಯೋವನ್ನು ಬಿಡುಗಡೆಗೊಳಿಸಿದರು.

ವೇದಿಕೆಯ ಮೇಲೆ ಸಿಎಂ ರಾಜಕೀಯ ಕಾರ್ಯದರ್ಶಿ ಬಿ.ಆರ್.ಪಾಟೀಲ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಶಾಸಕರಾದ ಅಜಯ ಸಿಂಗ್, ಅಲ್ಲಮಪ್ರಭು ಪಾಟೀಲ, ಎಂ ಎಲ್ ಸಿ ತಿಪ್ಪಣ್ಣಪ್ಪ ಕಮಕನೂರು, ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ, ಜಿಲ್ಲಾಧಿಕಾರಿ ಪೌಜಿಯಾ ತರನ್ನುಮ್, ಮಹಾನಗರ ಪಾಲಿಕೆ ಕಮೀಷನರ್ ಭುವನೇಶ ಪಾಟೀಲ, ಜಿಡಿಎ ಅಧ್ಯಕ್ಷ ಮಜರ್ ಖಾನ್, ಕಲಬುರಗಿ, ಬೀದರ್ ಯಾದಗಿರಿ ಹಾಲು ಒಕ್ಕೂಟ ಅಧ್ಯಕ್ಷ ಆರ್.ಕೆ.ಪಾಟೀಲ್ ಸೇರಿದಂತೆ ಹಲವರಿದ್ದರು.

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

2 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

3 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

3 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

3 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

4 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

4 hours ago