Categories: ಕಲಬುರಗಿ

ಕಲಬುರಗಿ: 300 ಕೋಟಿ ರೂ. ಬೆಳೆ ಪರಿಹಾರ ಬಿಡುಗಡೆ- ಸಿಎಂ ಬೊಮ್ಮಾಯಿ

ಕಲಬುರಗಿ: ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ಬೆಳೆಗಳಿಗೆ ದೊಡ್ಡ ಪ್ರಮಾಣದಲ್ಲಿ ಹಾನಿಯಾದ ನಂತರ ರಾಜ್ಯ ಸರ್ಕಾರವು ಕಳೆದ ಒಂದು ವಾರದಲ್ಲಿ 300 ಕೋಟಿ ರೂ.ಗಳಿಗೂ ಹೆಚ್ಚು ಬೆಳೆ ಪರಿಹಾರ ಹಣ ಬಿಡುಗಡೆ ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಶನಿವಾರ ಕಲಬುರಗಿ ನಗರದ ಪೊಲೀಸ್ ಪರೇಡ್ ಮೈದಾನ ರಸ್ತೆಯಲ್ಲಿ 18.50 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದ ಕಟ್ಟಡ ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಬೆಳೆ ಹಾನಿ ಕುರಿತಂತೆ ಜಿಲ್ಲಾಧಿಕಾರಿಗಳಿಂದ ವರದಿ ಪಡೆದುಕೊಂಡು ತಕ್ಷಣ ಪರಿಹಾರ ನೀಡಲಾಗುತ್ತಿದೆ. ಹಿಂದೆಲ್ಲ ಪರಿಹಾರ ನೀಡಲು ವರ್ಷಗಟ್ಟಲೆ ಬೇಕಾಗುತ್ತಿತ್ತು. ಇದೀಗ ಫ್ರೂಟ್ಸ್ ತಂತ್ರಾಂಶದಲ್ಲಿ ನಷ್ಟದ ಮಾಹಿತಿ ನಮೂದಿಸಿದ ಕೂಡಲೆ ರೈತರಿಗೆ ಪರಿಹಾರ ನೀಡಲಾಗುತ್ತಿದೆ ಎಂದರು.

ಒಣ ಬೇಸಾಯ ಜಮೀನಿಗೆ ಪ್ರತಿ ಹೆಕ್ಟೇರ್ಗೆ 6,800 ರೂ. ಗಳಿಂದ 13,600 ರೂ.ಗಳಿಗೆ, ನೀರಾವರಿ ಪ್ರದೇಶದ ಪ್ರತಿ ಹೆಕ್ಟೇರ್ಗೆ 13,000 ರೂ. ಗಳಿಂದ 25,000 ರೂ. ಗಳಿಗೆ ಹಾಗೂ ತೋಟಗಾರಿಕೆ ಪ್ರದೇಶದ ಪ್ರತಿ ಹೆಕ್ಟೇರ್ಗೆ 18,000 ರೂ. ಗಳಿಂದ 28,000 ರೂ. ಗಳಿಗೆ ಬೆಳೆ ಪರಿಹಾರ ಹೆಚ್ಚಿಸಲಾಗಿದೆ. ಎನ್.ಡಿ.ಆರ್.ಎಫ್. ಮಾರ್ಗಸೂಚಿ ಮೀರಿ ರಾಜ್ಯ ಸರ್ಕಾರ ಅನ್ನದಾತನಿಗೆ ಹೆಚ್ಚಿನ ಪರಿಹಾರ ನೀಡಿದೆ ಎಂದು ಸಿಎಂ ತಿಳಿಸಿದರು.

ಯು.ಕೆ.ಪಿ. ಕೃಷ್ಣಾ ನ್ಯಾಯಾಧಿಕರಣದಲ್ಲಿ ಪ್ರದೇಶಕ್ಕೆ ಹಂಚಿಕೆಯಾದ ನೀರು ಬಳಸಲು ಇನ್ನೂ ಅಧಿಸೂಚನೆ ಹೊರಡಿಸಿಲ್ಲ ಎಂದು ಪತ್ರತರ್ಕರು ಸಿ.ಎಂ. ಅವರ ಗಮನ ಸೆಳೆದಾಗ, ಪ್ರಕರಣ ಸುಪ್ರೀಂ ಕೋರ್ಟ್ನ ಪೀಠದಲ್ಲಿದ್ದು ಇಬ್ಬರು ನ್ಯಾಯಾಧೀಶರು ಪ್ರಕರಣದಿಂದ ಹಿಂದೆ ಸರಿದಿದ್ದಾರೆ. ಇದೀಗ ಹೊಸ ಮುಖ್ಯ ನ್ಯಾಯಾಧೀಶರ ನೇಮಕವಾಗಿದ್ದು, ಪೀಠಕ್ಕೆ ಹೊಸ ನ್ಯಾಯಾಧೀಶರನ್ನು ನೇಮಕ ಮಾಡಲು ನಮ್ಮ ವಕೀಲರ ಮೂಲಕ ಕೋರಲಾಗುತ್ತಿದೆ. ನೀರು ಹಂಚಿಕೆಯಾದ ಬಳಿಕ ಆಲಮಟ್ಟ ಜಲಾಶಯ ಎತ್ತರ 524 ಮೀಟರ್ ಗೆ ಏರಿಸಿ 9 ನೀರಾವರಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುವುದು ಎಂದರು. ಅಲ್ಲದೆ ಅಧಿಸೂಚನೆ ಹೊರಡಿಸಿದ ಕೂಡಲೇ ಕಾಲುವೆಗಳ ಮೂಲಕ ನೀರು ಹರಿಸಲು ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಐತಿಹಾಸಿಕವಾಗಿ 3,000 ಕೋಟಿ ರೂ. ನೀಡಿದ್ದು, ನಾಲ್ಕೇ ತಿಂಗಳಿನಲ್ಲಿ ಅಷ್ಟು ಮೊತ್ತದ ಕ್ರಿಯಾ ಯೋಜನೆಗೆ ಅನುಮೋದನೆ ನೀಡಿ ಕೆಲಸ ಆರಂಭಿಸಿದ್ದೇವೆ. ಈ ವರ್ಷದಲ್ಲಿಯೇ ಇದರ ಅನುಷ್ಠಾನಕ್ಕೆ ಒತ್ತು ನೀಡಿದ್ದೇವೆ. ಬಹುಜನರ ಬೇಡಿಕೆಯಂತೆ ಹೈದರಾಬಾದ್ ಕರ್ನಾಟಕ ಕೋಶ ಸಹ ಇಲ್ಲಿಗೆ ವರ್ಗಾಯಿಸಲಾಗುವುದು ಎಂದರು.

ಕಲ್ಯಾಣ ಕರ್ನಾಟಕ ಭಾಗದವರಿಗೆ ರಾಜ್ಯದ ಇತರೆಡೆ ಶೇ.8ರ ಮೀಸಲಾತಿಯನ್ನು ಶಿಕ್ಷಣ, ಉದ್ಯೋಗ ಮತ್ತು ಮುಂಬಡ್ತಿಯಲ್ಲಿ ನೀಡಲಾಗುವುದು. ಕೆಲವೊಂದು ಅಡಚಣೆಗಳಿತ್ತು. ಅದನ್ನೆಲ್ಲ ಇದೀಗ ನಿವಾರಿಸಲಾಗಿದೆ. ಸ್ಥಳೀಯರಿಗೆ ಕಲ್ಯಾಣ ಕರ್ನಾಟಕ ಹೊರತುಪಡಿಸಿದ ಪ್ರದೇಶದಲ್ಲಿ ಶೇ.8ರಷ್ಟು ಮೀಸಲಾತಿ ನೀಡಲಾಗುವುದು ಎಂದು ಭರವಸೆ ನೀಡಿದರು.

Gayathri SG

Recent Posts

ಬಾರ್ ಗೆ ನುಗ್ಗಿದ ಕಳ್ಳರು: 60 ಲೀಟರ್ ಮದ್ಯ ಕಳ್ಳತನ

ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…

24 seconds ago

ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೋರಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…

16 mins ago

ಗಾಳಿ ಸಮೇತ ಭಾರಿ ಮಳೆ : ನೆಲಕಚ್ಚಿದ ಮರಗಳು

ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು

40 mins ago

ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ : ತಮ್ಮಯ್ಯ

ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…

51 mins ago

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು- ತಮ್ಮಯ್ಯ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…

1 hour ago

ಮಕ್ಕಳು ಬೇಸಿಗೆ ರಜೆಯಲ್ಲಿ ಶಿಕ್ಷಣದಿಂದ ವಂಚಿತರಾಗಬಾರದು : ಶಿಕ್ಷಕ ಬಾಲಾಜಿ

ಬೇಸಿಗೆ ರಜೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಸಂಸ್ಥೆಗಳ ಬೇಸಿಗೆ ತರಬೇತಿ ಶಿಬಿರಗಳಿಗೆ ಮುಂದಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಕಳಿಸುವುದು ಸಾಮಾನ್ಯ.…

1 hour ago