Categories: ಕಲಬುರಗಿ

ಸಕಾಲ ಅರ್ಜಿ ವಿಲೇವಾರಿ: ಕಲಬುರಗಿ ಜಿಲ್ಲೆ ರಾಜ್ಯಕ್ಕೆ ಪ್ರಥಮ

ಕಲಬುರಗಿ: “ನವೆಂಬರ್ 2023ರ ಮಾಸಿಕದಲ್ಲಿ ಸಕಾಲ ಅರ್ಜಿಗಳ ವಿಲೇವಾರಿಯಲ್ಲಿ ಕಲಬುರಗಿ ಜಿಲ್ಲೆ ಶೇ.100ರಷ್ಟು ಸಾಧನೆಯೊಂದಿಗೆ ರಾಜ್ಯದಲ್ಲಿ ನಂಬರ್-1 ಸ್ಥಾನದಲ್ಲಿದೆ” ಎಂದು ಕಲಬುರಗಿ ಜಿಲ್ಲಾಧಿಕಾರಿ ಬಿ. ಪೌಜಿಯಾ ತರನ್ನುಮ್ ಹೇಳಿದರು.

ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮ-2011 ಮತ್ತು ತಿದ್ದುಪಡಿ ಅಧಿನಿಯಮ-2014ರಂತೆ 100ಕ್ಕೂ ಹೆಚ್ಚಿನ ಇಲಾಖೆಗಳ 1,181 ಸೇವೆಗಳನ್ನು ಕಾಲಮಿತಿಯಲ್ಲಿ ನಾಗರಿಕರಿಗೆ ನೀಡಲಾಗುತ್ತಿದೆ. ಕಳೆದ ಜೂನ್-2023ರ ತಿಂಗಳಿನಲ್ಲಿ ಅರ್ಜಿ ವಿಲೇವಾರಿ ಪ್ರಮಾಣ ಶೇ.82.54ರಷ್ಟು ಇದ್ದರೆ, ಪ್ರಸ್ತುತ ನವೆಂಬರ್‌ನಲ್ಲಿ ಸಲ್ಲಿಕೆಯಾದ 1,02,002 ಅರ್ಜಿಗಳಲ್ಲಿ 1,07,011 ಅರ್ಜಿ ವಿಲೇವಾರಿ ಮಾಡುವ ಮೂಲಕ ಶೇ.100.34ಕ್ಕೆ ಹೆಚ್ಚಿಸಿ ಆಡಳಿತಕ್ಕೆ ವೇಗ ನೀಡಲಾಗಿದೆ.

ಒಟ್ಟಾರೆ 2023ರ ಜೂನ್‌ನಿಂದ ನವೆಂಬರ್ ತನಕ ವಿವಿಧ ಇಲಾಖೆಯಡಿ ಸ್ವೀಕೃತ 7,23,259 ಅರ್ಜಿಗಳಲ್ಲಿ 7,25,716 ಅರ್ಜಿ ವಿಲೇವಾರಿಗೊಳಿಸಿದೆ. ಇದರಲ್ಲಿ ಕಂದಾಯ ಇಲಾಖೆಯು ಬಹಪಾಲು ಅಂದರೆ 5,89,786 ಅರ್ಜಿಗಳಲ್ಲಿ 5,93,992 ಅರ್ಜಿ ವಿಲೇವಾರಿ ಮಾಡುವ ಮೂಲಕ ವಿಲೇವಾರಿ ಪ್ರಮಾಣವನ್ನು ಶೇ.79.72 ರಿಂದ ಶೇ.100.71ಕ್ಕೆ ಹೆಚ್ಚಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Ashika S

Recent Posts

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

51 mins ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

1 hour ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

2 hours ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

2 hours ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

2 hours ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

3 hours ago