Categories: ಕಲಬುರಗಿ

ನಗರ ಬಸ್ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಹೆಸರಿಡಿ: ಗುರುನಾಥ ಪೂಜಾರಿ

ಕಲಬುರಗಿ: ನಗರದ ಸೂಪರ್ ಮಾರುಕಟ್ಟೆಯಲ್ಲಿ ನಿರ್ಮಿಸಲಾದ ನಗರ ಬಸ್ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣನವರ ಹೆಸರು ನಾಮಕರಣ ಮಾಡಬೇಕು’ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಗುರುನಾಥ ಪೂಜಾರಿ ಒತ್ತಾಯಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಸ್ ನಿಲ್ದಾಣದಿಂದ ಕೂಗಳತೆ ದೂರದಲ್ಲಿ ಸಂಗೊಳ್ಳಿ ರಾಯಣ್ಣ ವೃತ್ತ ಇದೆ.ಸಂಗೊಳ್ಳಿ ರಾಯಣ್ಣ ಅಪ್ರತಿಮ ಹೋರಾಟಗಾರ. ಅವರ ಹೋರಾಟವನ್ನು ಸ್ಮರಿಸಲು ನಿಲ್ದಾಣಕ್ಕೆ ಅವರ ಹೆಸರು ನಾಮಕರಣ ಮಾಡಬೇಕು’ ಎಂದರು.

ನಿಲ್ದಾಣಕ್ಕೆ ರಾಯಣ್ಣನವರ ಹೆಸರು ಇಡಬೇಕು ಎಂದು ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅವರು ಅಂದಿನ ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರಿಗೆ ಪತ್ರ ಬರೆದಿದ್ದರು. ಶ್ರೀರಾಮುಲು ಅವರು ಅದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿ, ಕ್ರಮ ಕೈಗೊಳ್ಳಲು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದರು ಎಂದು ತಿಳಿಸಿದರು.

ಜನವರಿ 25 ರಂದು ಬಸ್‌ ನಿಲ್ದಾಣ ಉದ್ಘಾಟನೆಯಾಗಲಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಉದ್ಘಾಟಿಸುವರು. ಅವರಿಗೂ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪರಮೇಶ ಆಲಗೂಡ, ಕಾರ್ಯದರ್ಶಿ ಶಿವರಾಜ ಪೂಜಾರಿ, ಪ್ರಧಾನ ಕಾರ್ಯದರ್ಶಿ ರವಿಪೂಜಾರಿ ಸೇರಿ ಹಲವರು ಹಾಜರಿದ್ದರು.

Gayathri SG

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

6 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

6 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

7 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

7 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

7 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

7 hours ago