Categories: ಕಲಬುರಗಿ

ಜೀವ ಜಲಕ್ಕಾಗಿ ಜೀವ ತ್ಯಾಗ ಮಾಡಲು ಸಿದ್ದನಾದ ಶಿವಕುಮಾರ ನಾಟಿಕಾರ

ಕಲಬುರಗಿ: ಸತತ ಏಳು ದಿನಗಳಿಂದ ತುತ್ತು ಅನ್ನ ಸೇವಿಸದೆ ಅಮರಣಾಂತ ಉಪವಾಸ ಸತ್ಯಾಗ್ರಹ ಮಾಡುತ್ತಿರುವ ಶಿವಕುಮಾರ ನಾಟಿಕಾರ ಅವರ ಆರೋಗ್ಯದಲ್ಲಿ ಏರುಪೇರು ಕಾಣುತ್ತಿದ್ದರೂ, ತಮ್ಮ ಆರೋಗ್ಯವನ್ನು ಲೆಕ್ಕಿಸದೆ ಭೀಮಾ ನದಿಯ ಅವಲಂಬಿತ ರೈತರಿಗೆ ಜನ ಜಾನುವಾರುಗಳಿಗೆ ನೀರು ಹರಿಸಲು ದಿಟ್ಟ ಹೆಜ್ಜೆಯನ್ನಿಟ್ಟು ಮುನ್ನಡೆಯುತ್ತಿದ್ದಾರೆ.

ದಿನನಿತ್ಯ ರಾಜಕೀಯ ಮುಖಂಡರು ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸತ್ಯಾಗ್ರಹ ಕೈಬಿಡುವಂತೆ ಮನವಿ ಮಾಡಿದರೂ ಭೀಮಾ ನದಿಗೆ ನೀರು ಹರಿಯುವವರೆಗೆ ನಾನು ಉಪವಾಸ ಸತ್ಯಾಗ್ರಹ ಕೈಬಿಡುವುದಿಲ್ಲ ಎಂದು ಗಟ್ಟಿಯಾಗಿ ಹಠ ಹಿಡಿದು‌ ಕುಳಿತಿರುವುದು ಸಾಮಾಜಿಕ ನ್ಯಾಯಕ್ಕಾಗಿ ಮಿಡಿಯುವ ಮಾನವೀಯ ಮೌಲ್ಯಗಳನ್ನು ಎತ್ತಿತೊರುತ್ತದೆ.ಈ ಮೊದಲು ಜಿಲ್ಲಾಧಿಕಾರಿಗಳ ನಿಯೋಗ ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿ ಪ್ರತಿಭಟನೆ ಕೈಬಿಡುವಂತೆ ನಡೆದ ಪ್ರಯತ್ನಗಳು ವಿಫಲವಾಗಿವೆ.

ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿದ ಬಿಜೆಪಿ ಯುವ ಮುಖಂಡ ರಿತೇಶ ಗುತ್ತೇದಾರ ಕುಡಿಯುವ ನೀರಿಗಾಗಿ ಅಮರಣಾಂತ ಉಪವಾಸ ಸತ್ಯಾಗ್ರಹ ಮಾಡುತ್ತಿರುವುದು ನಿಜಕ್ಕೂ ಪ್ರಶಂಸೆಗೆ ಮೀರಿದ್ದಾಗಿದೆ. ಶಿವಕುಮಾರ ನಾಟಿಕಾರ ಅವರ ಆರೋಗ್ಯದಲ್ಲಿ ಯಾವುದೇ ಏರುಪೇರು ಆಗದಿರಲಿ. ಅವರ ಹೋರಾಟಕ್ಕೆ ಜಯ ಸಿಕ್ಕೆ ಸಿಗುತ್ತದೆ ಅವರೊಂದಿಗೆ ನಾವು ಯಾವತ್ತು ಇರುತ್ತೆವೆ ಎಂದರು. ನಾವು ಹೋರಾಟಗಳನ್ನು ನೋಡಿದ್ದೆವೆ, ಆದರೆ ಇಂತಹ ಸುಡುವ ಬಿಸಿಲಿನಲ್ಲಿ ತಮ್ಮ ಆರೋಗ್ಯ ಲೆಕ್ಕಿಸದೆ ಜನರಿಗೆ ನೀರು ಒದಗಿಸಿಕೊಡಬೇಕು ಎನ್ನುವ ನಾಟಿಕಾರ ಅವರ ಹೋರಾಟ ಅವಿಸ್ಮರಣೀಯವಾಗಿದೆ ಎಂದರು.

ಇದೆ ಸಂದರ್ಭದಲ್ಲಿ ಮುಖಂಡರಾದ ಶಿವು ಮಾಸ್ತಾರ ಸೊನ್ನ, ಶಿವು ಗಾಣೂರ, ಶೈಲೇಶ ಗುಣಾರಿ, ಸುರೇಶ ಹಲಸಂಗಿ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Ashika S

Recent Posts

ಬಿಕರ್ನಕಟ್ಟೆ- ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಿನ್ನೆಲೆ ಸ್ಥಳೀಯರು ಆಕ್ರೋಶ

ನಗರದ ಹೊರವಲಯದ ಗುರುಪುರ ಕೈಕಂಬದಲ್ಲಿ ನಿರ್ಮಾಣ ಆಗಲಿರುವ ಮೆಲ್ಸೇತುವೆ ಕಾಮಗಾರಿ ನಡೆಯುತ್ತಿದ್ದು .ಕಾಮಗಾರಿ ವಿರುದ್ಧದ ಸ್ಥಳೀಯರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕಾಮಗಾರಿ…

5 mins ago

ಕ್ರೂಸರ್ ವಾಹನ ಪಲ್ಟಿ: 3 ಮಹಿಳೆಯರು ಮೃತ್ಯು

ಮಹಾರಾಷ್ಟ್ರಕ್ಕೆ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಕ್ರೂಸರ್ ವಾಹನ ಪಲ್ಟಿಯಾಗಿ ಮೂವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಸಾಂಗೋಲಾ- ಜತ್ತ ಮಾರ್ಗದ ಬಳಿ…

7 mins ago

ಪ್ರಜ್ವಲ್ ನನ್ನು ಹುಡುಕಿ ಕೊಟ್ಟವರಿಗೆ 1 ಲಕ್ಷ ಬಹುಮಾನ: ಪೋಸ್ಟರ್ ಅಂಟಿಸಿದ್ದ ಕಾರ್ಯಕರ್ತರು ವಶಕ್ಕೆ

ಪ್ರಜ್ವಲ್ ರೇವಣ್ಣನನ್ನು ಹುಡುಕಿಕೊಟ್ಟವರಿಗೆ ಒಂದು ಲಕ್ಷ ರೂ. ಬಹುಮಾನ ನೀಡುವುದಾಗಿ ಪೋಸ್ಟರ್ ಅಂಟಿಸಿದ್ದ ಜನತಾ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ…

20 mins ago

‘ಕಣ್ತಪ್ಪಿನಿಂದ’ ಆದ ಅಚಾತುರ್ಯ: ವಿಷಾದ ವ್ಯಕ್ತಪಡಿಸಿದ ಸುವರ್ಣ ನ್ಯೂಸ್

ಭಾರತದ ಮುಸ್ಲಿಮರ ಜನಸಂಖ್ಯೆ ತೋರಿಸಲು ಸುವರ್ಣ ನ್ಯೂಸ್ ಪಾಕಿಸ್ತಾನ ಧ್ವಜದ ಗ್ರಾಫಿಕ್ಸ್ ಬಳಸಿದ್ದು, ಭಾರೀ ಜನಾಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ…

27 mins ago

ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಗಾಡ್ ಪ್ರಾಮಿಸ್’ ಚಿತ್ರದ ಮುಹೂರ್ತ

ಕಾಂತಾರ ಚಿತ್ರದಲ್ಲಿ ಸಣ್ಣ ಪಾತ್ರ ಮಾಡುವ ಮೂಲಕ ಗಮನ ಸೆಳೆದಿದ್ದ ಯುವ ನಟ ಸೂಚನ್ ಶೆಟ್ಟಿ ಅವರು ಹೊಸ ಸಾಹಸಕ್ಕೆ…

50 mins ago

ತೇರಿನ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸ್ಥಳದಲ್ಲೇ ಮೃತ್ಯು

ತೇರಿನ ಚಕ್ರಕ್ಕೆ ವ್ಯಕ್ತಿಯೋರ್ವ ಸಿಲುಕಿ ಸಾವನ್ನಪ್ಪಿರುವ ಘಟನೆ ಅಣ್ಣಿಗೇರಿ ತಾಲೂಕಿನ ಮಜ್ಜಿಗುಡ್ಡ ಗ್ರಾಮದಲ್ಲಿ ಸಂಭವಿಸಿದೆ.

1 hour ago