Categories: ಕಲಬುರಗಿ

ಗಂಡು ಮಗುವಿಗೆ ಜನ್ಮ ನೀಡಿದ 10ನೇ ತರಗತಿ ವಿದ್ಯಾರ್ಥಿನಿ

ಕಲಬುರಗಿ: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನಲ್ಲಿ10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ ಪ್ರಕರಣವೊಂದು ಬೆಳಕಿಗೆ ಬಂದಿದೆ.

ವಿದ್ಯಾರ್ಥಿನಿಯ ದೊಡ್ಡಪ್ಪನ ಮಗನೇ ಕೃತ್ಯ ಎಸಗಿರುವುದಾಗಿ ಬಯಲಾಗಿದೆ.

ವಿದ್ಯಾರ್ಥಿನಿ ಕಲಬುರಗಿ ಜಿಲ್ಲೆಯಲ್ಲಿರುವ ವಸತಿ ಶಾಲೆಯೊಂದರಲ್ಲಿ ಓದುತ್ತಿದ್ದಳು. ಶಾಲೆಗೆ ರಜೆ ಇದ್ದಾಗೆಲ್ಲ ಆಕೆ ಮನೆಗೆ ಬರುತ್ತಿದ್ದಳು. ಹೀಗೆ ಬಂದಾಗ ಸಹೋದರ ಆಕೆಯನ್ನು ಬಳಸಿಕೊಳ್ಳುತ್ತಿದ್ದನು. ಅಲ್ಲದೇ ಈ ವಿಚಾರವನ್ನು ಬಾಯಿಬಿಟ್ಟರೆ ಕೊಲೆ ಮಾಡುವ ಬೆದರಿಕೆಯನ್ನು ಕೂಡ ಹಾಕಿದ್ದನು. ಹೀಗಾಗಿ ಆಕೆ ಅತ್ಯಾಚಾರ ವಿಚಾರವನ್ನು ಮುಚ್ಚಿಟ್ಟಿದ್ದಳು.

ವಿದ್ಯಾರ್ಥಿನಿ ದಪ್ಪ ಇರುವುದರಿಂದ ಕುಟುಂಬಸ್ಥರು ಕೂಡ ಆಕೆಯ ದೇಹದಲ್ಲಿ ಆಗುತ್ತಿರುವ ಬದಲಾವಣೆ ಕಂಡು ಹಿಡಿಯುವ ಪ್ರಯತ್ನ ಮಾಡಿಲ್ಲ. ಆದರೆ ಡಿಸೆಂಬರ್‌ 24 ರಂದು ಶಾಲೆಯಲ್ಲಿ ಇದ್ದಾಗ ಆಕೆಗೆ ಜೋರಾಗಿ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಹೀಗಾಗಿ ಶಿಕ್ಷಕರಿಗೆ ಹೇಳಿ ಆಕೆ ಸಂಬಂಧಿಕರ ಮನೆಗೆ ತೆರಳಿದ್ದಾಳೆ. ನಂತರ ಸಂಬಂಧಿಕರು‌ ವಿದ್ಯಾರ್ಥಿನಿ ಕುಟಂಬದವರಿಗೆ ಮಾಹಿತಿ ನೀಡಿದ್ದಾರೆ. ಬಳಿಕ‌ ಆಕೆಯನ್ನು ಮಹಾರಾಷ್ಟ್ರದ ಸೊಲ್ಲಾಪುರದ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಯಿತು.

ಚಿಕತ್ಸೆಗೆ ದಾಖಲು ಮಾಡುತ್ತಿದ್ದಂತೆಯೇ ಆಕೆ ಗಂಡು ಮಗುವಿಗೆ ಜನ್ಮ ಕೊಟ್ಟಿದ್ದಾಳೆ. ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮ ಕೊಟ್ಟಿರುವ ವಿಚಾರ ಗೊತ್ತಾಗ್ತಿದ್ದಂತೆ ಕುಟುಂಬಸ್ಥರು ಕೂಡ ಶಾಕ್‌ ಆಗಿದ್ದಾರೆ.

ಮಹಾರಾಷ್ಟ್ರ ಪೊಲೀಸರು ನಿಂಬರ್ಗಾ ಪೊಲೀಸರನ್ನು ಸಂಪರ್ಕ ಮಾಡಿ ನಿಂಬರ್ಗಾ ಪೊಲೀಸರು ವಿದ್ಯಾರ್ಥಿನಿಯ ವಿಚಾರಣೆ ನಡೆಸಿದರು. ಈ ವೇಳೆ ಅಣ್ಣನಿಂದ ಕೃತ್ಯ ಆಗಿರುವುದು ಬಯಲಾಗಿದೆ.

ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲು ಮಾಡಲಾಯಿತು.

Ashika S

Recent Posts

ಈಶಾನ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿಗಳ ಬಂಡಾಯ ಶಮನ: ವಿಜಯೇಂದ್ರ ಮಾತಕತೆ ಸಕ್ಸಸ್

ಈಶಾನ್ಯ ಪದವೀಧರ ಕ್ಷೇತ್ರ, ನೈಋತ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ…

6 mins ago

ಥಾಯ್ಲೆಂಡ್ ಓಪನ್ 2024: ಸಾತ್ವಿಕ್-ಚಿರಾಗ್ ಜೋಡಿಗೆ ಭರ್ಜರಿ ಗೆಲುವು

ಇಂದು (ಭಾನುವಾರ) ನಡೆದ ಥಾಯ್ಲೆಂಡ್‌ ಓಪನ್‌ ಸೂಪರ್‌ 500 ಬ್ಯಾಡ್ಮಿಂಟನ್‌ ಫೈನಲ್​ ಪಂದ್ಯದಲ್ಲಿ ಗೆದ್ದು ಚಾಂಪಿಯನ್​ ಪಟ್ಟ ಅಲಂಕರಿಸಿದ್ದಾರೆ.

18 mins ago

ಕೇರಳದ ಕೆಲವು ರಾಜ್ಯಗಳಿಗೆ ಮೇ 20 ರವರೆಗೆ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಕೇರಳದ ಪತ್ತನಂತಿಟ್ಟ, ಇಡುಕ್ಕಿ, ಅಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಮೇ 20 ರವರೆಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್…

55 mins ago

ಕೇಜ್ರಿವಾಲ್ ನಿವಾಸದ ಸಿಸಿಟಿವಿ ಡಿವಿಆರ್ ಪೊಲೀಸ್‌ ವಶಕ್ಕೆ

ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ತಂಡವು ಭಾನುವಾರ…

58 mins ago

5 ದಿನ ಮೀನುಗಾರಿಕೆಗೆ ತೆರಳದಂತೆ ಉತ್ತರ ಕನ್ನಡ ಜಿಲ್ಲಾಡಳಿತ ಸೂಚನೆ

ಮೇ 18 ರಿಂದ ಮೇ 22 ರ ವರೆಗೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ…

1 hour ago

ರಾಹುಲ್, ಅಖಿಲೇಶ್ ಯಾದವ್ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಕಾಲ್ತುಳಿತ

 ಪಕ್ಷದ ಕಾರ್ಯಕರ್ತರ ಗದ್ದಲ, ಕಾಲ್ತುಳಿತದಂತಹ ಪರಿಸ್ಥಿತಿಯಿಂದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್…

1 hour ago