News Karnataka Kannada
Sunday, April 28 2024
ಕಲಬುರಗಿ

ಸಾಂಬಾರ ಪಾತ್ರೆಯಲ್ಲಿ ಬಿದ್ದು ಗಾಯಗೊಂಡ ವಿದ್ಯಾರ್ಥಿನಿ: ಶಿಕ್ಷಕಿ ಅಮಾನತು

Student injured after falling into a spice vessel, teacher suspended
Photo Credit : News Kannada

ಕಲಬುರಗಿ: ಅಫಜಲಪುರ ತಾ| ಚಿಣಮಗೇರಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ತಯಾರಿಸುತ್ತಿದ್ದ ವೇಳೆ ಸಾಂಬಾರ್ ಪಾತ್ರೆಗೆ ವಿದ್ಯಾರ್ಥಿನಿ ಮಹಾಂತಮ್ಮ ಜಮಾದಾರ ಬಿದ್ದು ಗಾಯಗೊಂಡ ಹಿನ್ನೆಲೆಯಲ್ಲಿ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಲಾಲಬಿ ನದಾಫ ಹಾಗೂ ಸಹ ಶಿಕ್ಷಕ ರಾಜು ಚವ್ಹಾಣ ಅವರನ್ನು ಡಿಡಿಪಿಐ ಸಕ್ರೆಪ್ಪಗೌಡ ಬಿರಾದಾರ ಅವರು ಸೇವೆಯಿಂದ ಅಮಾನತುಗೊಳಿಸಿದ್ದಾರೆ.

ಮುಖ್ಯ ಅಡುಗೆ ಸಿಬ್ಬಂದಿ ಕಸ್ತೂರಿಬಾಯಿ ಎಂ. ತಳಕೇರಿ ಅವರನ್ನು ಸೇವೆಯಿಂದ ವಜಾ ಮಾಡಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಆದೇಶ ಹೊರಡಿಸಿದ್ದಾರೆ.

ಗುರುವಾರ ಮಧ್ಯಾಹ್ನ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿರುವ ಮಹಾಂತಮ್ಮ ಅಡುಗೆ ಪಾತ್ರೆಯಲ್ಲಿ ಬಿದ್ದಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದು, ಕಲಬುರಗಿಯ ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶೇ 40ರಷ್ಟು ಸುಟ್ಟ ಗಾಯಗಳಾಗಿವೆ. ಶಾಲೆಗೆ ಹಾಜರಾಗಿ ಅಡುಗೆ ಕೆಲಸ ಮಾಡಬೇಕಿದ್ದ ಕಸ್ತೂರಿಬಾಯಿ ಅವರು ಅನಧಿಕೃತವಾಗಿ ಗೈರಾಗಿದ್ದರು. ಅಲ್ಲದೇ, ಗೈರು ಹಾಜರಿಯಲ್ಲಿ ಮಕ್ಕಳಿಗೆ ವ್ಯವಸ್ಥಿತವಾಗಿ ಅಡುಗೆ ನೀಡಲು ಯಾವುದೇ ವ್ಯವಸ್ಥೆ ರೂಪಿಸಲು ಕ್ರಮ ಕೈಗೊಂಡಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು